ಕರ್ನಾಟಕ

ಮಾರ್ಚ್ 6ರಂದು ಕಲಬುರಗಿಯಲ್ಲಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

ಕಲಬುರಗಿ: ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಇದೇ 6ರಂದು ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ಇಲ್ಲಿನ ಎನ್ ವಿ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಬಿಜೆಪಿ ರ್ಯಾಲಿ ಏರ್ಪಡಿಸಲಾಗಿದೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ಇಂದು ಈ ವಿಷಯ ತಿಳಿಸಿದ್ದಾರೆ.

ಈ ಹಿಂದೆ ಮಾರ್ಚ್ 1 ನಂತರ ಮಾರ್ಚ್ 7ರಂದು ಮೋದಿ ರ್ಯಾಲಿ ಎಂದು ನಿಗದಿಯಾಗಿತ್ತು. ಆದರೆ, ಈಗ ಕೊನೇ ಕ್ಷಣದಲ್ಲಿ ಮೇ 6ರಂದು ಕಲಬುರಗಿಯಲ್ಲಿ ಮೋದಿ ರಾರ‍ಯಲಿ ನಡೆಸಲು ನಿರ್ಧರಿಸಲಾಗಿದೆ. ಅಂದು ಮಧ್ಯಾಹ್ನ ನಡೆಯಲಿರುವ ಸಮಾವೇಶದಲ್ಲಿ ಮೋದಿ ಅವರು ಕಲಬುರಗಿ ಮಾತ್ರವಲ್ಲದೆ ನೆರೆಯ ಜಿಲ್ಲೆಗಳಿಂದಲೂ ಆಗಮಿಸುವ ಲಕ್ಷಾಂತರ ಮಂದಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬೆಳಗ್ಗೆ 10.40ರ ಸುಮಾರಿಗೆ ವಿಶೇಷ ವಿಮಾನದಲ್ಲಿ ಮೋದಿಯವರು ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ರಸ್ತೆ ಮೂಲಕ ಪ್ರಯಾಣಿಸಿ ಕಲಬುರಗಿಗೆ ಆಗಮಿಸಲಿದ್ದಾರೆ, ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸುವ ಮುನ್ನ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆ ಫಲಾನುಭವಿಗಳೊಂದಿಗೆ ಮತ್ತು ಭಾರತ್ ಪೆಟ್ರೋಲಿಯಂ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಅಗತ್ಯ ಸಿದ್ಧತೆಗಳು ನಡೆಯುತ್ತಿವೆ.

Comments are closed.