ಕರ್ನಾಟಕ

ಉಮೇಶ್ ಜಾಧವ್ ರಾಜೀನಾಮೆ ಬೆನ್ನಲ್ಲೇ ಭಿನ್ನಮತ ಸ್ಫೋಟ

Pinterest LinkedIn Tumblr


ಯಾದಗಿರಿ: ಕಾಂಗ್ರೆಸ್ ಶಾಸಕರಾಗಿ ಆಯ್ಕೆ ಆಗಿದ್ದ ಉಮೇಶ್ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಲು ಸಿದ್ಧರಾಗುತ್ತಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಯಾದಗಿರಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ್ ಜಾಧವ್ ಅವರು ಈ ಬಾರಿ ಬಿಜೆಪಿ ಪಕ್ಷದಿಂದ ಲೋಕಸಭಾ ಸ್ಥಾನಕ್ಕೆ ಸ್ಪರ್ಧೆ ಮಾಡಿ ಮಲ್ಲಿಕಾರ್ಜುನ ಖರ್ಗೆರನ್ನು ಸೋಲಿಸಬೇಕೆಂಬ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಇತ್ತ ಬಿಜೆಪಿ ಕದ ತಟ್ಟುತ್ತಾರೆ ಎಂಬ ಮಾತಿನ ನಡುವೆಯೇ ಯಾದಗಿರಿ ಬಿಜೆಪಿಯಲ್ಲಿ ಭಿನ್ನ ಮತ ಸ್ಫೋಟಗೊಂಡಿದ್ದು, ಇದು ಜಾಧವ್ ಅವರಿಗೆ ಹಿನ್ನೆಡೆ ಆಗಲಿದೆಯಾ ಎಂಬ ಚರ್ಚೆ ಜಿಲ್ಲಾ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ.

ಕಾಂಗ್ರೆಸ್ ಅತೃಪ್ತ ಶಾಸಕ ಉಮೇಶ್ ಜಾದವ್ ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಗೆ ಜಾಧವ್ ಬಿಜೆಪಿಯಿಂದ ಜಾಧವ್ ಸ್ಪರ್ಧೆ ಮಾಡುವುದು ಪಕ್ಕಾ ಆಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಕಲಬುರಗಿ ಲೋಕಸಭೆ ಕ್ಷೇತ್ರದ ಒಂದು ಭಾಗವಾಗಿರುವ ಯಾದಗಿರಿ ಜಿಲ್ಲೆಯಲ್ಲಿ, ಶಾಸಕ ಮತ್ತು ಜಿಲ್ಲಾಧಕ್ಷರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಇದು ಜಾಧವ್ ಗೆಲುವಿಗೆ ಭಾರಿ ಹೊಡೆತ ನೀಡುವ ಮುನ್ಸೂಚನೆಯನ್ನು ನೀಡುತ್ತದೆ. ವೈಯಕ್ತಿಕ ವಿಚಾರಕ್ಕಾಗಿ ಸುರಪುರ ಶಾಸಕ ರಾಜುಗೌಡ ಮತ್ತು ಜಿಲ್ಲಾಧ್ಯಕ್ಷ ಚಂದ್ರಶೇಖರ ಮಾಗನೂರ ನಡುವೆ ಮೊದಲಿಂದಲೂ ಮುಸುಕಿನ ಗುದ್ದಾಟವಿದೆ ಎನ್ನಲಾಗಿದೆ. ಆದರೆ ಈ ಇಬ್ಬರ ಒಳ ಜಗಳ ಸದ್ಯ ಬಿಜೆಪಿಗೆ ಮುಳುವಾಗುವ ಲಕ್ಷಣಗಳ ಕಂಡು ಬರುತ್ತಿವೆ.

ಜಿಲ್ಲೆಯಲ್ಲಿ ಮೋದಿ ವಿಜಯ ರಥ ಯಾತ್ರೆಗೆ ಶಾಸಕ ರಾಜುಗೌಡರಿಗೆ ಆಹ್ವಾನವೇ ನೀಡದಿರುವುದು. ಹೀಗಾಗಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯುತ್ತಿದ್ದರು, ಶಾಸಕ ರಾಜುಗೌಡ ಮತ್ತು ಸುರಪುರ, ಶಹಾಪುರ ವಿಧಾನ ಸಭಾ ಕ್ಷೇತ್ರದ ಪ್ರಮುಖರು ಯಾತ್ರೆಯಲ್ಲಿ ಭಾಗವಹಿಸಿರಲಿಲ್ಲ. ಇದು ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಸ್ವತಃ ಶಾಸಕ ರಾಜುಗೌಡ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಜಿಲ್ಲೆಯಲ್ಲಿ ರಾಜುಗೌಡ ಸ್ಟಾರ್ ಪ್ರಚಾರಕರಾಗಿದ್ದು ಅವರನ್ನು ಜಿಲ್ಲೆಯ ಪ್ರಮುಖ ಕಾರ್ಯಕ್ರಮಗಳಲ್ಲಿ ಕಡೆಗಣಿಸುತ್ತಿರುವುದು ಪಕ್ಷದ ಕಾರ್ಯಕರ್ತರ ಗೊಂದಲಕ್ಕೆ ಕಾರಣವಾಗಿದೆ. ನಾನು ರಾಜ್ಯದ ನಾಯಕರ ಮಾತಿನಂತೆ, ಜಿಲ್ಲೆಯ ಕಾರ್ಯಕ್ರಮದ ಪಟ್ಟಿ ತಯಾರಿಸುತ್ತೇನೆ. ಇದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧ್ಯಕ್ಷ ಚಂದ್ರಶೇಖರ ಸಮರ್ಥನೆ ನೀಡಿದ್ದಾರೆ.

Comments are closed.