ಬೆಂಗಳೂರು: ನಾಮ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯವಾಗತ್ತೆ ಎಂದಿದ್ದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ವ್ಯಾಪಕ ಚರ್ಚೆಯಾಗುತ್ತಿದ್ದಂತೆ ಅವರು ತಮ್ಮ ಹೇಳಿಎಕೆ ಸಂಬಂಧ ಸ್ಪಷ್ಟನೆ ನಿಡಿದ್ದಾರೆ.
“ಹೌದು, ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ನಾನು ಈ ಹೇಳಿಕೆ ನೀಡಿದ್ದೆ” ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
“ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ ಬಿಜೆಪಿ ನಾಯಕರೆಲ್ಲ ಇವುಗಳನ್ನೆಲ್ಲ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳಲು ಹೊರಟರೋ, ಅದ ನಂತರ ಕುಂಕುಮ,ಕಾವಿ ಹಾಕಿಕೊಂಡವರನ್ನು ಜನತೆ ಸಂಶಯ-ಭಯದಿಂದ ನೋಡುವಂತಾಗಿದೆ
“ನಾನು ಬಿಜೆಪಿ ನಾಯಕರಿಗಿಂತ ಒಳ್ಳೆಯ ಹಿಂದು. ನಾನೆಂದೂ ಅವರಂತೆ ತಿಲಕ,ಕಾವಿ, ಧರ್ಮಗಳನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿಲ್ಲ. ನನ್ನದು ಜನಪರ ರಾಜಕಾರಣ, ದೇವರು, ಧರ್ಮ ಎಲ್ಲ ನನ್ನ ಮನೆಯೊಳಗಿನ ನಂಬಿಕೆ.” ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ಬಾಗಲಕೋಟೆಯಲ್ಲಿ ಕೆಂದೂರು ಕೆರೆಗೆ ನೀರು ತುಂಬಿಸುವ ಯೋಜನೆ ಚಾಲನೆ ನೀಡಿ ಮಾತನಾಡಿದ ಅವರು, ಯಾಕೋ ಗೊತ್ತಿಲ್ಲ ನನಗೆ ಹಣೆಗೆ ಉದ್ದ ನಾಮ ಇಟ್ಟುಕೊಂಡವರನ್ನು ಕಂಡರೆ ಭಯವಾಗುತ್ತದೆ ಎಂದು ಹೇಳಿದುದು ಭಾರೀ ಚರ್ಚೆಗೆ ಕಾರಣವಾಗಿತ್ತು.
ಕರ್ನಾಟಕ
Comments are closed.