ಕರ್ನಾಟಕ

ಹಾಲಿ ಸಂಸದರಿಗೆ ಟಿಕೆಟ್ ಪಕ್ಕಾ: ಯಡಿಯೂರಪ್ಪ-ಅಮಿತ್ ಶಾ ಸಭೆಯ ಹೈಲೆಟ್ಸ್

Pinterest LinkedIn Tumblr


ನವದೆಹಲಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರತೊಡಗಿದೆ. ಆದ್ರೆ ದಿನಾಂಕ ಘೋಷಣೆಗೂ ಮುನ್ನವೇ ಅಭ್ಯರ್ಥಿಗಳ ಆಯ್ಕೆ ಕಸರತ್ತು ಜೋರಾಗಿ ನಡೆದಿದೆ.

ಇಂದು [ಶುಕ್ರವಾರ] ಬಿಜೆಪಿ ರಾಜ್ಯಾಧ್ಯ್ಷಕ್ಷ ಬಿಎಸ್. ಯಡಿಯೂರಪ್ಪ ದೆಹಲಿಯಲ್ಲಿ ರಾಷ್ಟ್ರೀ ಅಧ್ಯಕ್ಷ ಅಮಿತ್ ಶಾ ಜೊತೆ ಗಂಭೀರ ಚರ್ಚೆ ನಡೆಸಿದರು.

ರಾಜ್ಯದ 28 ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದು ಮಾರ್ಚ್ 15 ರ ಆಸುಪಾಸು ಬಿಜೆಪಿ ಪಾರ್ಲಿಮೆಂಟರಿ ಬೋರ್ಡು ಸಭೆ ಸೇರಿ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ.

ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಫೈನಲ್

ಬಹುತೇಕ ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ಫೈನಲ್ ಆಗಿದ್ದು. ಯಾವ ಹಾಲಿ ಶಾಸಕರಿಗೂ ಲೋಕಸಭೆ ಚುನಾವಣೆಗೆ ಟಿಕೆಟ್ ಇಲ್ಲ ಎನ್ನುವ ನಿರ್ಧಾರಕ್ಕೆ ಬರಲಾಗಿದೆ.

ಇನ್ನೂ ಅನಂತ್ ಕುಮಾರ್ ನಿಧನದಿಂದಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆ ಎದ್ದಿದ್ದು, ಈ ವಿಚಾರ ದಿಲ್ಲಿ ನಾಯಕರಿಗೆ ಬಿಟ್ಟಿದ್ದು ಎಂದು ಯಡಿಯೂರಪ್ಪ ಹೇಳಿದರು.

ಇನ್ನೂ ಕಾಂಗ್ರೆಸ್ ಜೆಡಿಎಸ್-ಮೈತ್ರಿ ನಿರ್ಧಾರದ ಬಳಿಕ ಯಡಿಯೂರಪ್ಪ ಬೆಂಗಳೂರಿನಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಸಲಿದ್ದು, ಅಲ್ಲಿ ತುಮಕೂರು, ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ನಡೆಯಲಿದೆ.

Comments are closed.