ಕರ್ನಾಟಕ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಇಂದು ಮಳೆ ಸಾಧ್ಯತೆ

Pinterest LinkedIn Tumblr


ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಮಂಗಳವಾರ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಂಡ್ಯ, ಮೈಸೂರು, ಚಿಕ್ಕಮಗಳೂರು ಹಾಗೂ ಹಾಸನದ ಹಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಸೋಮವಾರ, ಕೊಡಗು 50, ಹಾಸನ ಹಾಗೂ ಚಿಕ್ಕಮಗಳೂರಿನ ವಿವಿಧೆಡೆ 10ರಿಂದ 12 ಮಿ.ಮೀ. ಪ್ರಮಾಣದ ಮಳೆಯಾಗಿದೆ. ಆದರೆ, ಉತ್ತರ ಕರ್ನಾಟಕ ಭಾಗದ ಬಳ್ಳಾರಿ, ಕೊಪ್ಪಳ 39, ಕಲಬುರ್ಗಿ 38.5, ರಾಯಚೂರು 40 ಸೇರಿದಂತೆ ವಿವಿಧೆಡೆ 36ರಿಂದ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಮೇಲ್ಮೈ ಸುಳಿಗಾಳಿಯಿಂದಾಗಿ ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಎರಡು ಮೂರು ದಿನಗಳಲ್ಲಿ ಇದ್ದ ಗರಿಷ್ಠ ತಾಪಮಾನಕ್ಕೆ ಹೋಲಿಸಿದರೆ ಸದ್ಯ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್​ನಷ್ಟಿದ್ದ ಗರಿಷ್ಠ ತಾಪಮಾನ 34ಕ್ಕೆ ಇಳಿಕೆಯಾಗಿದೆ. ಆದರೆ, ಉತ್ತರ ಒಳನಾಡಿನಲ್ಲಿ ಮಾತ್ರ ವಾಡಿಕೆಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್​ನಷ್ಟು ಗರಿಷ್ಠ ತಾಪಮಾನ ಏರಿಕೆ ಕಂಡಿದೆ. ಹೈದರಾಬಾದ್​ ಕರ್ನಾಟಕ ಭಾಗದಲ್ಲಿ 41 ಡಿಗ್ರಿ ಸೆಲ್ಸಿಯಸ್​ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ತಿಳಿಸಿದ್ದಾರೆ.

Comments are closed.