ಕರ್ನಾಟಕ

ಹೈಕಮಾಂಡ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು: ರಾಜಿನಾಮೆ ನೀಡಿ ಸುಮಲತಾ ಪರ ಪ್ರಚಾರ!

Pinterest LinkedIn Tumblr


ಮಂಡ್ಯ: ಮೈತ್ರಿ ಧರ್ಮದ ಪ್ರಕಾರ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು, ಆದರೆ ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವೈಷಮ್ಯವಿರುವುದು ಬಹಿರಂಗ ಸತ್ಯ.
ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಅವರಿಗೆ ಬೆಂಬಲ ನೀಡಬಾರದೆಂದು ಹೈಕಮಾಂಡ್ ಆದೇಶ ಹೊರಡಿಸಿದ್ದರೂ, ಕಾಂಗ್ರೆಸ್ ಕಾರ್ಯಕರ್ತರು ಕ್ಯಾರೆ ಅನ್ನುತ್ತಿಲ್ಲ, ಜೊತೆಗೆ ಜಲ ಸಂಪನ್ಮೂಲ ಸಚಿವ ಡಿ,ಕೆ ಶಿವಕುಮಾರ್, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಬೇಕೆಂದು ಆದೇಶ ಹೊರಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಯಾವುದಕ್ಕೂ ಬಗ್ಗದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.
ಒಂದು ವೇಳೆ ಸುಮಲತಾ ಅವರಿಗೆ ಬೆಂಬಲ ನೀಡಿದರೇ ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದರೂ ಅದಕ್ಕೆ ಕೇರ್ ಮಾಡದ ಕಾರ್ಯಕರ್ತರು ರಾಜೀನಾಮೆ ನೀಡಿಲು ಮುಂದಾಗಿದ್ದಾರೆ. ಸಾಮೂಹಿಕವಾಗಿ ರಾಜೀನಾಮೆ ನೀಡಿ ಸುಮಲತಾ ಅವರಿಗೆ ಬೆಂಬಲ ನೀಡಲು ಕಾಂಗ್ರೆಸ್ ಜಿಲ್ಲಾ ನಾಯಕರು ನಿರ್ಧರಿಸಿದ್ದಾರೆ,
ಬೂತ್ ಮಟ್ಟದ ಕಾರ್ಯಕರ್ತರು ಸ್ವಇಚ್ಚೆಯಿಂದ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಸುಮಲತಾ ಅವರನ್ನು ಮಾತ್ರ ಗಮನದಲ್ಲಿರಿಸಿಕೊಂಡಿದ್ದಾರೆ, ಅವರ ಗೆಲುವು ಮಾತ್ರ ಮುಖ್ಯವಾಗಿದೆ. ಸ್ಥಳೀಯ ನಾಯಕರು ಕಾಂಗ್ರೆಸ್ ಕಾರ್ಯಕರ್ತರ ಮತಗಳು ಜೆಡಿಎಸ್ ಗೆ ಬದಲಾಗುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ, ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ನಡೆದ ತಂತ್ರ ಮತ್ತೆ ಈ ಲೋಕಸಭೆ ಚುನಾವಣೆಯಲ್ಲಿ ಪುನಾರಾವರ್ತನೆಯಾಗುವುದು ಬೇಕಾಗಿಲ್ಲ, ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತಗಳು ಬಿಜೆಪಿ ಪರವಾಗಿ ಚಲಾವಣೆಯಾಗಿದೆ.

Comments are closed.