ಕರ್ನಾಟಕ

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮತಯಂತ್ರ, ವಿವಿಪ್ಯಾಟ್ ಗಳ ಬಳಕೆ ಕುರಿತು ಮಾಹಿತಿ !

Pinterest LinkedIn Tumblr

ಕೊಪ್ಪಳ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಚುನಾವಣಾ ಆಯೋಗ ಕೂಡ ಮತದಾರರಲ್ಲಿ ಮತದಾನದ ಅರಿವು ಮೂಡಿಸುವ ಕೆಲಸಕ್ಕೆ ಚಾಲನೆ ನೀಡಿದ್ದು, ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಮತಯಂತ್ರ ಮತ್ತು ವಿವಿಪ್ಯಾಟ್ ಗಳ ಬಳಕೆ ಕುರಿತು ಮಾಹಿತಿ ನೀಡಿದೆ.

ಕರ್ನಾಟಕದ ಕೊಪ್ಪಳದ ಹಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಆಗಮಿಸಿ ಅಲ್ಲಿ ನೆರೆದಿದ್ದ ನೂರಾರು ಮಂದಿಯ ಮುಂದೆ ಮತಯಂತ್ರ ಮತ್ತು ವಿವಿಪ್ಯಾಟ್ ಗಳ ಬಳಕೆ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೆ ಮತದಾನದ ಮಹತ್ವದ ಕುರಿತೂ ಅಧಿಕಾರಿಗಳು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವ ಕೆಲಸ ಕೂಡ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಇನ್ನು ಇದೇ ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಈಗಾಗಲೇ ಚುನಾವಣಾ ಆಯೋಗ ಮತದಾರ ಪಟ್ಟಿ ತಯಾರಿಸುವ ಕಾರ್ಯದಲ್ಲಿ ಮಗ್ನವಾಗಿದ್ದು, ಮತದಾರರ ಪಟ್ಟಿಗೆ ಹೊಸದಾಗಿ ಮತದಾನ ಮಾಡುವ ಮತದಾರರು ಹೆಸರು ನೋಂದಣಿ ಮಾಡಿಕೊಳ್ಳಬಹುದು. ಆಯೋಗದ ವೆಬ್ ಸೈಟ್ ನಲ್ಲಿ ಈ ಬಗ್ಗೆ ಮಾಹಿತಿ ಇದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಚುನಾವಣಾ ಆಯೋಗದ ಕಚೇರಿ ಸಂಪರ್ಕಿಸುವಂತೆ ಅಧಿಕಾರಿಗಳು ಹೇಳಿದ್ದಾರೆ.

Comments are closed.