ಕರ್ನಾಟಕ

ಸುಮಲತಾ ಬೆಂಬಲಿಸಲು ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಹಾಕದಿರಲು ನಿರ್ಧರಿಸಿದ ಬಿಜೆಪಿ!

Pinterest LinkedIn Tumblr


ಬೆಂಗಳೂರು: ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದೇ ಭಾವಿಸಲಾಗಿತ್ತು, ಆದರೆ ಮೈತ್ರಿ ಸರ್ಕಾರದ ಧರ್ಮದಂತೆ ಮಂಡ್ಯ ಲೋಕಸಭೆ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.
ಹೀಗಾಗಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ನಟಿ ಸುಮಲತಾ ಅಂಬರೀಷ್ ಅವರನ್ನು ಬೆಂಬಲಿಸಲು ನಿರ್ಧರಿಸಿರುವ ಕೇಂದ್ರ ಬಿಜೆಪಿ ನಾಯಕರು ಅಭ್ಯರ್ಥಿಯನ್ನು ಹಾಕದರಿಲು ನಿರ್ಧರಿಸಿದ್ದಾರೆ.
ಮಂಡ್ಯ ಲೋಕಸಕ್ಷೇ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರ ಸ್ವಾಮಿ ಪುತ್ರ ನಿಖಿಲ್ ಹೆಸರನ್ನು ಘೋಷಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗುತ್ತದೆ ಎಂದು ನಿರೀಕ್ಷಿಸಿದ್ದ ಸುಮಲತಾ ಆಸೆಗೆ ತಣ್ಣೀರೆರಚಿದಂತಾಗಿದೆ. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ಮಂಡ್ಯದಲ್ಲಿ ಸುಮಲತಾ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದೆ.
ಸುಮಲತಾ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಸ್ಪಷ್ಚವಾಗಿದೆ, ಹೀಗಾಗಿ ಬಿಜೆಪಿ ಹೈಕಮಾಂಡ್ ಸುಮಲತಾ ಬೆಂಬಲಕ್ಕೆ ಸೂಚಿಸಿದೆ, ಈ ಹಿನ್ನೆಲೆಯಲ್ಲಿ ಇದು ಸುಮಲತಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ, ಅನುಕಂಪದ ಅಲೆಯ ಲಾಭ ಪಡೆಯುತ್ತಿರುವ ಸಮುಲತಾಗೆ ಈಗಾಗಲೇ ಭರ್ಜರಿ ಬೆಂಬಲ ಸಿಕ್ಕಿದೆ.
ಸ್ಥಳೀಯ ನಾಯಕರೆಲ್ಲರೂ ಸುಮಲತಾ ಬೆಂಬಲಕ್ಕೆ ನಿಂತಿದ್ದಾರೆ, ಬಿಜೆಪಿ ಕೂಡ ನಟಿಯ ಬೆನ್ನಿಗೆ ನಿಂತಿದ್ದು, ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ.

Comments are closed.