ಕರ್ನಾಟಕ

ದೇವೇಗೌಡರನ್ನು ಗೆಲ್ಲಿಸುತ್ತೇವೆ; ಕೃಷ್ಣಭೈರೇಗೌಡ

Pinterest LinkedIn Tumblr


ಬೆಂಗಳೂರು: ಮೊಮ್ಮಗನಿಗೆ ಕ್ಷೇತ್ರ ನೀಡಿ ಬೆಂಗಳೂರು ಉತ್ತರ ಕ್ಷೇತ್ರದತ್ತ ಮುಖಮಾಡಿರುವ ದೇವೇಗೌಡರ ಗೆಲುವಿಗೆ ನಾವೆಲ್ಲಾ ಶ್ರಮವಹಿಸುತ್ತೇವೆ ಎಂದು ಕಾಂಗ್ರೆಸ್​ನಾಯಕರು ಭರವಸೆ ನೀಡಿದ್ದಾರೆ.

ಕಾಂಗ್ರೆಸ್​ ಶಾಸಕರು ಅಧಿಕ ಸಂಖ್ಯೆಯಲ್ಲಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಜೆಡಿಎಸ್​ಗೆ ಒಲಿದಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಅಭ್ಯರ್ಥಿ ಪರ ಯಾವ ರೀತಿ ಪ್ರಚಾರ ಕೈಗೊಳ್ಳಬೇಕು ಎಂಬ ಕುರಿತು ಇಂದು ಕ್ಷೇತ್ರದ ಜೆಡಿಎಸ್​ ಹಾಗೂ ಕಾಂಗ್ರೆಸ್​ ನಾಯಕರು ಸಭೆ ನಡೆಸಿದರು.

ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೋಪಾಲಯ್ಯ, ಮಂಜುನಾಥ, ಎಸ್ ಟಿ ಸೋಮಶೇಖರ್, ಭೈರತಿ ಸುರೇಶ, ಭೈರತಿ ಬಸವರಾಜ, ಉಭಯ ಪಕ್ಷಗಳ ಶಾಸಕರು ಭಾಗಿಯಾಗಿದ್ದರು.

ಸಭೆ ಬಳಿಕ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ದೇವೇಗೌಡ ಅಭ್ಯರ್ಥಿ ಆದರೆ ಶಿರಸಾ ವಹಿಸಿ ಕೆಲಸ ಮಾಡುತ್ತೇವೆ. ಸಭೆಯಲ್ಲಿ ದೇವೇಗೌಡ ಗೆಲುವಿಗೆ ಶ್ರಮಿಸಲು ಎಲ್ಲರು ಒಮ್ಮತದ ನಿರ್ಧಾರ ಮಾಡಿದ್ದೇವೆ. ಗೌಡರನ್ನ ಗೆಲ್ಲಿಸಲು ನಾವೆಲ್ಲಾ ಕಂಕಣಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ದೇವೇಗೌಡ ಅವರು ಇನ್ನು ಎಲ್ಲಿಂದ ಸ್ಪರ್ಧೆ ಮಾಡುತ್ತೇವೆ ಎಂದು ಖಚಿತ ಪಡಿಸದ ಹಿನ್ನೆಲೆಯಲ್ಲಿ ಬೇರೆ ಅಭ್ಯರ್ಥಿಯಾದ್ರೆ ಹೇಗೆಂಬುದರ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಇನ್ನು ಕಾಂಗ್ರೆಸ್​ ಶಾಸಕರು ಹಾಗೂ ಒಕ್ಕಲಿಗ ಮತಗಳು ಕ್ಷೇತ್ರದಲ್ಲಿ ಹೆಚ್ಚಾಗಿದ್ದು ನಮ್ಮ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ರಾಹುಲ್​ ಗಾಂಧಿ ಸ್ಪರ್ಧೆ ಮಾತು ಕೂಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಬಹಳ ದಿನದಿಂದಲೂ ರಾಹುಲ್ ಗಾಂಧಿ ರಾಜ್ಯದಿಂದ ಸ್ಪರ್ಧೆ ಮಾಡಲಿ ಎನ್ನುವ ಮಾತಿದೆ. ಆ ಮಾತು ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಈ ಹಿಂದೆ ಚಿಕ್ಕಮಗಳೂರಿನಿಂದ ಇಂದಿರಾ ಗಾಂಧಿ ಕೂಡ ಸ್ಪರ್ಧಿಸಿ ಗೆದ್ದಿದ್ದಾರೆ. ರಾಹುಲ್​ ಗಾಂಧಿ ಇಲ್ಲಿಂದ ಸ್ಪರ್ಧೆ ಮಾಡ ಬಯಸಿದರೆ, ನಾವು ಸ್ವಾಗತಿಸುತ್ತೇವೆ ಎಂದರು.

Comments are closed.