ಕರ್ನಾಟಕ

ಮಂಡ್ಯದಲ್ಲಿ ಸುಮಲತಾ ಸ್ಪರ್ಧೆ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ಗೊತ್ತೇ…?

Pinterest LinkedIn Tumblr

ಚಿಕ್ಕಮಗಳೂರು: ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೆಣಸೆ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾದವರೆಲ್ಲ ರಾಜ್ಯದ ಜನತೆ ಮುಂದೆ ಬಂದಿದ್ದಾರೆ. ಬರಲಿ ಬಿಡಿ ಸಂತೋಷ. ಮಂಡ್ಯ ಜನತೆಗಾಗಿ ಏನೇನು ಮಾಡುತ್ತಾರೆ ನೋಡೋಣ ಎಂದರು.

ಚುನಾವಣೆಯೆಂಬ ಯುದ್ಧ ಗೆಲ್ಲಲು ಶಾರದಾಂಬೆಯ ಆಶೀರ್ವಾದ ಬೇಕು. ಕೇವಲ ನಿಖಿಲ್ ಒಬ್ಬನಿಗಾಗಿ ತಾಯಿ ಸನ್ನಿಧಿಗೆ ಬಂದಿಲ್ಲ. 28 ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ. ನಮ್ಮ ಕುಟುಂಬದ ನಂಬಿಕೆ ಹಿನ್ನೆಲೆಯಲ್ಲಿ ಶೃಂಗೇರಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಸಿಎಂ ತಿಳಿಸಿದರು.

ಪ್ರಮೋದ್ ಮಧ್ವರಾಜ್ ಜೆಡಿಎಸ್‌ನಿಂದ ಕಣಕ್ಕಿಳಿಯುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಮಧ್ವರಾಜ್ ಬೇರೆಯವರಲ್ಲ. ಅವರು ನಮ್ಮವರೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆಂದು ಹೇಳಿದರು.

ಇದಕ್ಕೂ ಮುನ್ನ, ಶೃಂಗೇರಿ ದೇವಾಲಯಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳ ಕುಟುಂಬಸ್ಥರು ತಾಯಿ ಶಾರದಾಂಬೆಯ ಆಶೀರ್ವಾದ ಪಡೆದರು.

ಇದೇ ವೇಳೆ ಸುಮಲತಾ ಅಂಬರೀಷ್ ಸ್ಪರ್ಧೆ ಕುರಿತಂತೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಸುಮಲತಾ ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

Comments are closed.