ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ, ಲೋಕಸಭೆ ಉಪಚುನಾವಣೆಯಿಂದ ಹಿಡಿದು ಅಂಬರೀಷ್ ನಿಧನದ ಸಮಯದಲ್ಲಿಯೂ ಬೆಂಗಳೂರಿಗೆ ಬಾರದ ರಮ್ಯಾ ಇದೀಗ ಬೆಂಗಳೂರಿನಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮದ ಉಸ್ತುವಾರಿ ಹೊಣೆ ಹೊತ್ತಿರುವ ರಮ್ಯಾ ಇಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಆಯೋಜಿಸಿರುವ ರಾಹುಲ್ ಗಾಂಧಿ ಸಂವಾದದ ಹಿನ್ನೆಲೆಯಲ್ಲಿ ರಮ್ಯಾ ಅವರು ಇಲ್ಲಿ ಕಾಣಿಸಿಕೊಂಡಿದ್ದಾರೆ.
ಇಂದು ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ, ಮಧ್ಯಾಹ್ನ ಕಲಬುರಗಿಯಲ್ಲಿ ರಾಜಕೀಯ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆನಂತರ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ. ರಮ್ಯಾ ಅವರು ಕೂಡ ಈ ಸಂವಾದದಲ್ಲಿ ಭಾಗಿಯಾಗಿದ್ದಾರೆ.
Comments are closed.