ಕರ್ನಾಟಕ

ಸುಮಲತಾ ಪರ ನಿಂತ ನಟ ದರ್ಶನ್, ಯಶ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು!

Pinterest LinkedIn Tumblr

ಬೆಂಗಳೂರು: ನಟರಾದ ದರ್ಶನ್ ಮತ್ತು ಯಶ್ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅವರಿಗೆ ಬಹಿರಂಗವಾಗಿ ಬೆಂಬಲ ಮತ್ತು ಪ್ರಚಾರ ನೀಡುವುದಾಗಿ ಈ ಇಬ್ಬರು ನಟರು ಘೋಷಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಪ್ರಕರಣ ಬರುವುದರಿಂದ ಜನರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿರುವುದರಿಂದ ಚುನಾವಣಾ ಅಧಿಕಾರಿಗಳಿಗೆ ರಕ್ಷಣಾ ವೇದಿಕೆಯ ಮುಖಂಡರು ದೂರು ಸಲ್ಲಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯುವವರೆಗೆ ನಟರಾದ ದರ್ಶನ್ ಮತ್ತು ಯಶ್ ಅವರ ಚಲನಚಿತ್ರಗಳು, ಟಿ ವಿ ಕಾರ್ಯಕ್ರಮಗಳು, ಜಾಹೀರಾತುಗಳು ಮತ್ತು ಸಿನಿಮಾಗಳನ್ನು ಪ್ರಸಾರ ಮಾಡಬಾರದು.

ಚುನಾವಣೆ ಮುಗಿಯುವವರೆಗೆ ಈ ಇಬ್ಬರು ನಟರ ಎಲ್ಲಾ ಮನರಂಜನಾ ಕಾರ್ಯಕ್ರಮಗಳಿಗೆ ತಡೆ ನೀಡಬೇಕೆಂದು ಕೋರಿ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯರಾಜು ನಾಯ್ಡು ತಿಳಿಸಿದ್ದಾರೆ.

Comments are closed.