ಕರ್ನಾಟಕ

ಬೆಂಗಳೂರು ಉತ್ತರದಿಂದ ನಾನು ಸ್ಪರ್ಧಿಸುವುದು ಖಚಿತ: ಡಿವಿ ಸದಾನಂದ ಗೌಡ

Pinterest LinkedIn Tumblr


ಮಂಡ್ಯ: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ತಮ್ಮ ಸ್ಪರ್ಧೆ ಖಚಿತ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ನಾಗಮಂಗಲ ಆದಿಚುಂಚನಗಿರಿ ಮಠಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರ ಬದಲಾಯಿಸುವ ಪ್ರಶ್ನೆಯಿಲ್ಲ. ಆದರೆ, ಅವರೇ ಕ್ಷೇತ್ರ ಬದಲಾಯಿಸುತ್ತಿದ್ದಾರೆ ಎಂದು ದೇವೇಗೌಡರ ಹೆಸರೇಳದೆ ಟಾಂಗ್ ನೀಡಿದರು.

ರಾಜ್ಯದಲ್ಲಿ ಕುಟುಂಬ ರಾಜಕಾರಣ ಹೆಚ್ಚಾಗಿದೆ. ಅದರಲ್ಲಿ ಕೆಲವು ಪಕ್ಷಗಳು ಕುಟುಂಬ ಸದಸ್ಯರನ್ನು ಹೊರತುಪಡಿಸಿ ಇತರರನ್ನು ಚಾಮರ ಬೀಸಲು ಮೀಸಲಿರಿಸಿದ್ದಾರೆ. ಕರ್ನಾಟಕದಲ್ಲಿ ಮಹಾಘಟಬಂಧನ್ ವಿರುದ್ದ ನಮ್ಮ ಹೋರಾಟ ನಡೆಯುತ್ತಿದೆ ಎಂದರು.

ದೇಶದೆಲ್ಲೆಡೆ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಕೇವಲ 37 ಸಂಖ್ಯೆ ಹೊಂದಿದವರೇ ರಾಜ್ಯ ನಡೆಸುತ್ತಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅವರಿಗೆ ಬೆಂಬಲ ಕೊಡುವ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಆದಿಚುಂಚನಗಿರಿ ಮಠಕ್ಕೆ ವೀರಪ್ಪ ಮೊಯ್ಲಿ ಭೇಟಿ

ಚಿಕ್ಕಬಳ್ಳಾಪುರ ಸಂಸದ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಮಂಗಳವಾರ ಭೇಟಿ ನೀಡಿ, ಡಾ.ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಚುನಾವಣೆ ಸ್ಪರ್ಧೆ ಹಿನ್ನಲೆಯಲ್ಲಿ ಶ್ರೀಗಳ ಆಶೀರ್ವಾದ ಪಡೆದ ಮಾಜಿ ಸಿಎಂ ವೀರಪ್ಪಮೊಯ್ಲಿ, ಒಕ್ಕಲಿಗರ ಮತ ಸೆಳೆಯುವ ನಿಟ್ಟಿನಲ್ಲಿ ಮೊಯ್ಲಿ ಮಠಕ್ಕೆ ಭೇಟಿ ನೀಡಿದ್ದಾರೆಂಬ ಬಗ್ಗೆ ಚರ್ಚೆ ನಡೆಯುತ್ತಿತ್ತು.

Comments are closed.