ಕರ್ನಾಟಕ

ಸಾವಿರಾರು ಬೆಂಬಲಿಗರೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸುಮಲತಾ: ಯಶ್, ಅಭಿಷೇಕ್​, ರಾಕ್​ಲೈನ್​ ಸಾಥ್

Pinterest LinkedIn Tumblr

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ದಿವಂಗತ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ ಅವರು ನೇರವಾಗಿ ಮಂಡ್ಯ ತಾಲೂಕು ಇಂಡುವಾಳಿಗೆ ಆಗಮಿಸಿ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಅವರ ನಿವಾಸಕ್ಕೆ ತೆರಳಿದರು. ನಟ ಯಶ್ ಅವರೂ ಸಚ್ಚಿದಾನಂದ ನಿವಾಸಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸುಮಲತಾ ಅವರೊಂದಿಗೆ ಪುತ್ರ ಅಭಿಷೇಕ್, ನಟ ಯಶ್, ರಾಕಲೈನ್ ವೆಂಕಟೇಶ್, ದೊಡ್ಡಣ್ಣ, ಅಂಬರೀಶ್ ಸೋದರನ ಪುತ್ರ ಮಧುಸೂದನ್ ಸೇರಿದಂತೆ ಹಲವರು ಇದ್ದರು.

ಸುಮಲತಾ ಅವರು ನಾಮಪತ್ರ ಸಲ್ಲಿಸುವ ವೇಳೆ ಕೆಲ ಕಾಂಗ್ರೆಸ್ ನಾಯಕರು, ಅಂಬರೀಶ್ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ಅಭಿಮಾನಿಗಳು ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.

ನಾಮಪತ್ರ ಸಲ್ಲಿಸಿದ ನಂತರ ಸುಮಲತಾ ಅವರು ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶಕ್ಕೆ ಮೆರವಣಿಗೆ ಮೂಲಕ ತೆರಳಿದರು.

ಸುಮಲತಾ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರ ಬೆಂಬಲ
ಮಂಡ್ಯದಲ್ಲಿ ಕೈ-ತೆನೆ ಮೈತ್ರಿ ಅಭ್ಯರ್ಥಿಯಾಗಿ ನಿಖೀಲ್‌ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದರೂ ಮಂಡ್ಯದ ಕೆಲ ಕಾಂಗ್ರೆಸ್‌ ಕಾರ್ಯಕರ್ತರು ಸುಮಲತಾ ಅವರಿಗೆ ಬಹಿರಂಗ ಬೆಂಬಲವನ್ನು ಸೂಚಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ವೇಳೆ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ಸುಮಲತಾ ಅವರಿಗೆ ಬಹಿರಂಗ ಬೆಂಬಲವನ್ನು ಸೂಚಿಸಿದ್ದಾರೆ.

Comments are closed.