ಕರ್ನಾಟಕ

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ!

Pinterest LinkedIn Tumblr


ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ದೆಹಲಿಯಲ್ಲಿ ತಡರಾತ್ರಿವರೆಗೂ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಗೆ ಸಮಿತಿ ಅಂತಿಮ ಮುದ್ರೆ ಒತ್ತಿದೆ.
ಚುನಾವಣೆ ಸಮಿತಿ ಸಭೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಲು ರಾಜ್ಯ ನಾಯಕರು ವಿರೋಧ ವ್ಯಕ್ತಪಡಿದ್ದಾರೆ ಎನ್ನಲಾಗಿದೆ.ರಾಜ್ಯ ನಾಯಕರ ವಿರೋಧದ ನಡುವೆಯೂ ಹಾಲಿ ಸಂಸದರಿಗೆ ಟಿಕೆಟ್ ನೀಡುವುದನ್ನು ಕೇಂದ್ರ ಚುನಾವಣಾ ಸಮಿತಿ ಖಚಿತಪಡಿಸಿದೆ.
ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳಲ್ಲಿ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಗೆ ಸಮಿತಿ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಮಂಡ್ಯ ಕ್ಷೇತ್ರಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ್ ಹೆಸರು ಅಂತಿಮಗೊಳಿಸಿದ್ದು, ಸುಮಲತಾ ಅವರಿಗೆ ಬೆಂಬಲ ನೀಡದಿದ್ದರೆ ಪಕ್ಷದ ಅಸ್ಥಿತ್ವದ ದೃಷ್ಟಿಯಿಂದ ಅಶ್ವಥ್ ನಾರಾಯಣ್ ಕಣಕ್ಕಿಳಿಸುವ ಸಾಧ್ಯತೆ ಇದೆ.
ಬಿಜೆಪಿಯ ಹಾಲಿ ಎಲ್ಲಾ ಸಂಸದರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ. ಮಂಡ್ಯದಲ್ಲಿ ಅಭ್ಯರ್ಥಿ ಕಣಕ್ಕಿಳಿಸಬೇಕೇ ಅಥವಾ ಬೇಡವೇ ಎಂದು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಂದು ಬೆಂಗಳೂರಿನ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರಾತ್ರಿ ೧ ಗಂಟೆವರೆಗೂ ಚುನಾವಣಾ ಸಮಿತಿ ಸಭೆ ನಡೆಯಿತು. ಟಿಕೆಟ್ ಆಯ್ಕೆ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ‌. ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಗಲಿದೆ. ಹಾಲಿ ಎಲ್ಲಾ ಸಂಸದರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ ಎಂದು ಅವರು ಸ್ಪಷ್ಟಪಡಿಸಿದರು.
ಅಭ್ಯರ್ಥಿಗಳ ಪಟ್ಟಿ
ಚಾಮರಾಜನಗರ- ಶ್ರೀನಿವಾಸಪ್ರಸಾದ್
ಮೈಸೂರು-ಕೊಡಗು- ಪ್ರತಾಪ ಸಿಂಹ
ಮಂಡ್ಯ -ಅಶ್ವಥ್ ನಾರಾಯಣ್
ಹಾಸನ- ಎ.ಮಂಜು
ಉಡುಪಿ, ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ
ದಕ್ಷಿಣ ಕನ್ನಡ- ನಳೀನ್ ಕುಮಾರ್ ಕಟೀಲ್
ಶಿವಮೊಗ್ಗ- ಬಿ.ವೈ ರಾಘವೇಂದ್ರ
ಉತ್ತರ ಕನ್ನಡ- ಅನಂತಕುಮಾರ್ ಹೆಗಡೆ
ಬೆಳಗಾವಿ – ಸುರೇಶ್ ಅಂಗಡಿ
ಚಿಕ್ಕೋಡಿ- ರಮೇಶ್ ಕತ್ತಿ
ವಿಜಾಪುರ- ರಮೇಶ್ ಜಿಗಜಿಣಗಿ
ಬಾಗಲಕೋಟೆ- ಪಿ.ಸಿ. ಗದ್ದೀಗೌಡರ್
ಹಾವೇರಿ- ಶಿವಕುಮಾರ್ ಉದಾಸಿ
ಹುಬ್ಬಳ್ಳಿ ಧಾರವಾಡ- ಪ್ರಹ್ಲಾದ್ ಜೋಷಿ
ದಾವಣಗೆರೆ- ಜಿ.ಎಂ. ಸಿದ್ದೇಶ್ವರ್
ಚಿತ್ರದುರ್ಗ- ಎ. ನಾರಾಯಣಸ್ವಾಮಿ
ಕೊಪ್ಪಳ- ಕರಡಿ ಸಂಗಣ್ಣ
ರಾಯಚೂರು- ಅಮರೇಶ್ ನಾಯಕ್
ಬಳ್ಳಾರಿ- ದೇವೇಂದ್ರಪ್ಪ
ಬೀದರ್- ಭಗವಂತ ಖೂಬಾ
ಕಲ್ಬುರ್ಗಿ- ಉಮೇಶ್ ಜಾಧವ್,
ಕೋಲಾರ- ಚಲವಾದಿ ನಾರಾಯಣಸ್ವಾಮಿ
ಚಿಕ್ಕಬಳ್ಳಾಪುರ- ಬಿ.ಎನ್.ಬಚ್ಚೇಗೌಡ
ತುಮಕೂರು- ಜಿ.ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ನಿಶಾ ಯೋಗಿಶ್ವರ್
ಬೆಂಗಳೂರು ದಕ್ಷಿಣ- ತೇಜಸ್ವಿನಿ ಅನಂತಕುಮಾರ್
ಬೆಂಗಳೂರು ಕೇಂದ್ರ- ಪಿ.ಸಿ. ಮೋಹನ್
ಬೆಂಗಳೂರು ಉತ್ತರ- ಡಿ.ವಿ. ಸದಾನಂದಗೌಡ

Comments are closed.