ಕರ್ನಾಟಕ

ಸುಮಲತಾ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಬೆಂಬಲ: ಸಮರ್ಥನೆ

Pinterest LinkedIn Tumblr


ಬೆಂಗಳೂರು: ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದು, ಇದೀಗ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ನಡೆಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, ಸುಮಲತಾ ಅವರಿಗೆ ಪಕ್ಷದ ಮುಖಂಡರು ಬೆಂಬಲ ನೀಡಿಲ್ಲ. ಆದರೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕೆಲವರು ಅಂಬರೀಷ್ ಅಭಿಮಾನಿಗಳಿದ್ದು, ಅಂಬರೀಷ್ ಮೇಲಿನ ಅಭಿಮಾನಕ್ಕೆ ಕೆಲವು ಕಾರ್ಯಕರ್ತರು ಹೋಗಿರಬಹುದು ಎಂದರು.
ರಾಮಲಿಂಗಾರೆಡ್ಡಿ ಮಾತನಾಡಿ, ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಆದರೆ ಅಂಬರೀಷ್ ಮೇಲಿನ ಅಭಿಮಾನಕ್ಕೆ ಕೆಲವರು ಹೋಗಿರುವ ಸಾಧ್ಯತೆಯಿದೆ ಎಂದರು.

Comments are closed.