ಬೆಂಗಳೂರು/ನವದೆಹಲಿ: ಲೋಕಸಭಾ ಚುನಾವಣೆ 2019 ಹಿನ್ನೆಲೆ ಬಿಜೆಪಿ ತನ್ನ 5ನೇ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದೆ. ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ಗೆ ಬಾಹ್ಯ ಬೆಂಬಲ ನೀಡಲು ತೀರ್ಮಾನಿಸಿದೆ.
ದೆಹಲಿಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜೆ.ಪಿ ನಡ್ಡಾ ದೇಶಾದ್ಯಂತ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಈ ಪೈಕಿ ಕರ್ನಾಟಕದ 2ನೇ ಪಟ್ಟಿ ಇದಾಗಿದೆ.
ಕರ್ನಾಟಕದಲ್ಲಿ ಉಳಿದಿರುವ 7 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯನ್ನು ಪ್ರಕಟಿಸಿದರು. ಕೋಲಾರ ಲೋಕಸಭಾ ಕ್ಷೇತ್ರದಿಂದ ಮುನಿಸ್ವಾಮಿಗೆ ಟಿಕೆಟ್ ನೀಡಲಾಗಿದೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ಗೆ ಬೆಂಬಲ ನೀಡಲು ಬಿಜೆಪಿ ತೀರ್ಮಾನಿಸಿದೆ.
ಮೊನ್ನೆ [ಗುರುವಾರ] ರಾಜ್ಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಆದ್ರೆ ಈ ಪಟ್ಟಿಯಲ್ಲಿ 28 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಲಾಗಿತ್ತು.
ಇದೀಗ 2ನೇ ಪಟ್ಟಿ ರಿಲೀಸ್ ಆಗಿದ್ದು, 2 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಿಲ್ಲ.
1.ಕೋಲಾರ- ಮುನಿಸ್ವಾಮಿ
2. ಮಂಡ್ಯ- ಸುಮಲತಾಗೆ ಬೆಂಬಲ
3. ಕೊಪ್ಪಳ-ಪ್ರಕಟವಾಗಿಲ್ಲ
4. ಬೆಂಗಳೂರು ಗ್ರಾಮಾಂತರ-ಪ್ರಕಟವಾಗಿಲ್ಲ
5. ಬೆಂಗಳೂರು ದಕ್ಷಿಣ-ಪ್ರಕಟವಾಗಿಲ್ಲ
6.ರಾಯಚೂರು-ಪ್ರಕಟವಾಗಿಲ್ಲ
7.ಚಿಕ್ಕೋಡಿ- ಪ್ರಕಟವಾಗಿಲ್ಲ.
Comments are closed.