ಹಾಸನ: ಹಾಸನ ಲೋಕಸಭಾ ಬಿಜೆಪಿ ಅಭ್ಯರ್ಥಿ ಎ.ಮಂಜು ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ಶಪಥ ಮಾಡುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.
ಶನಿವಾರ ಹಾಸನದ ಬೇಲೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುತ್ತೇನೆ. 8 ಕಡೆಯೂ ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿ ನನ್ನದು ಎಂದು ಕಾರ್ಯಕರ್ತರ ಸಭೆಯಲ್ಲಿ ಬಾಯ್ತಪ್ಪಿ ಹೇಳಿದ್ದಾರೆ.
ಬಾಯ್ತಪ್ಪಿ ಆಡಿದ ಮಾತಿಗೆ ವೇದಿಕೆ ಮೇಲಿಂದಲೇ ಬಿಜೆಪಿ ಬಿಜೆಪಿ ಎಂದು ಕೂಗುವ ಮೂಲಕ ಕಾರ್ಯಕರ್ತರು ತಪ್ಪಿನ ಮನವರಿಕೆ ಮಾಡಿದ್ದಾರೆ. ಬಳಿಕ ಎಚ್ಚೆತ್ತ ಮಂಜು, ಬಿಜೆಪಿ ಗೆಲ್ಲಿಸೋಣ ಎಂದು ಹೇಳಿ ತಮ್ಮ ಮಾತನ್ನು ಸರಿಪಡಿಸಿಕೊಂಡರು.
ವಾರದ ಹಿಂದಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಎ.ಮಂಜು, ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣನ ವಿರುದ್ಧ ಚುನಾವಣಾ ಅಖಾಡಕ್ಕಿಳಿದಿರುವ ಮಂಜು, ದೇವೇಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿದ್ದಾರೆ.
Comments are closed.