ಕರ್ನಾಟಕ

ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುವುದಿಲ್ಲ: ಸುಮಲತಾಗೆ ಬೆಂಬಲ

Pinterest LinkedIn Tumblr


ನವದೆಹಲಿ: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಸೂಚಿಸಿದೆ.

ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಗೊಳಿಸಿದ ಜೆ.ಪಿ.ನಡ್ಡಾ, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡುವುದಾಗಿ ಎಂದು ಅಧಿಕೃತವಾಗಿ ಘೋಷಿಸಿದರು. ಇದೀಗ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾರ ನಡುವೆ ನೇರ ಸ್ಪರ್ಧೆ ಏರ್ಪಡಲಿದೆ.

ಈ ಮೊದಲು ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಡಾ. ಸಿದ್ದರಾಮಯ್ಯರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿತ್ತು. ಆದ್ರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸುಮಲತಾರಿಗೆ ಬೆಂಬಲ ನೀಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರನ್ನು ಕಟ್ಟಿಹಾಕಲು ಬಿಜೆಪಿ ತೀರ್ಮಾನಿಸಿದೆ. ಅದರೆ ಉಳಿದ ಐದು ಕ್ಷೇತ್ರಗಳ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಿಲ್ಲ. ಬಾಕಿ ಉಳಿದ ಚಿಕ್ಕೋಡಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ರಾಯಚೂರು ಮತ್ತು ಕೊಪ್ಪಳ ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರ ಘೋಷಿಸುವುದಾಗಿ ಜೆ.ಪಿ.ನಡ್ಡಾ ಹೇಳಿದರು.

Comments are closed.