ಕರ್ನಾಟಕ

ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ, ಅಶ್ವತ್ಥ​ ನಾರಾಯಣ ಬೆಂ. ಗ್ರಾಮಾಂತರ ಬಿಜೆಪಿ ಅಭ್ಯರ್ಥಿ

Pinterest LinkedIn Tumblr

ನವದೆಹಲಿ: ಲೋಕಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಪ್ರಕಟಿಸಿದೆ. ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಎಲ್.ಎಸ್. ಕಣಕ್ಕಿಳಿದರೆ ಬೆಂಗಳೂರು ಗ್ರಾಮಾಂತರದಲ್ಲಿ ಅಶ್ವತ್ಥ ನಾರಾಯಣ್ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ನಂತರ ಬೆಂಗಳೂರು ದಕ್ಷಿಣ ಅಭ್ಯರ್ಥಿಯನ್ನಾಗಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಕಣಕ್ಕಿಳಿಯಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿತ್ತು. ಆದರೆ ಹೈಕಮಾಂಡ್ ಕಡೇ ಕ್ಷಣದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಬದಲು ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದೆ.

ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಹ ಯೋಗೀಶ್ವರ್ ಅಥವಾ ಅವರ ಪುತ್ರಿಗೆ ಟಿಕೆಟ್ ದಕ್ಕಲಿದೆ ಎಂದು ಭಾವಿಸಲಾಗಿತ್ತು. ಆದರೆ ಬಿಜೆಪಿ ಅಲ್ಲಿ ಶಾಸಕ ಅಶ್ವತ್ಥ ನಾರಾಯಣ್ ಅವರನ್ನು ಕಣಕ್ಕಿಳಿಸಿದೆ.

ಇದಲ್ಲದೆ ಅಸ್ಸಾಂ, ಉತ್ತರ ಪ್ರದೇಶದ ತಲಾ ಒಂದೊಂದು ಕ್ಷೇತ್ರಕ್ಕೆ ಸಹ ಇಂದು ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಒಡಿಶಾ ವಿಧಾನಸಭೆ ಚುನಾವಣೆಗಾಗಿ ಸಹ ಓರ್ವ ಅಭ್ಯರ್ಥಿಯನ್ನು ಇದೇ ಸಮಯದಲ್ಲಿ ಕಮಲ ಪಾಳಯ ಪ್ರಕಟಿಸಿದೆ.

Comments are closed.