ಕರ್ನಾಟಕ

ತೇಜಸ್ವಿನಿ ಅನಂತ್ ಕುಮಾರ್’ರಿಗೆ ಟಿಕೆಟ್ ಕೈ ತಪ್ಪಿದ್ದೇಗೆ ಎಂದು ನನಗೆ ಗೊತ್ತಿಲ್ಲ : ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದೇಗೆ ಎಂದು ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ತೇಜಸ್ವಿನಿ ಅನಂತ್ ಕುಮಾರ್ ಅವರೊಬ್ಬರ ಹೆಸರನ್ನೇ ಶಿಫಾರಸ್ಸು ಮಾಡಿ ಕಳುಹಿಸಿದ್ದೆವು. ಆದರೆ ದೆಹಲಿಯಲ್ಲಿ ಏನಾಯ್ತು ಗೊತ್ತಿಲ್ಲ. ಇದು ಅಚ್ಚರಿಯ ಬೆಳವಣಿಗೆ ಎಂದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ತೇಜಸ್ವಿ ಸೂರ್ಯ ಅವರನ್ನ ಆಯ್ಕೆ ಮಾಡಲಾಗಿದೆ. ಇದುವರೆಗೂ ದಿ. ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗುವುದು ಪಕ್ಕಾ ಆಗಿತ್ತು. ಆದರೆ ಕೊನೆ ಗಳಿಗೆಯಲ್ಲಿ ಬಿಜೆಪಿ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ. ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

Comments are closed.