ಕರ್ನಾಟಕ

ರಾಜ್ಯದ ಮೊದಲ ಹಂತದ ಚುನಾವಣೆಗೆ 340 ಅಭ್ಯರ್ಥಿಗಳಿಂದ 452 ನಾಮಪತ್ರಗಳು ಸಲ್ಲಿಕೆ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದು [ಮಂಗಳವಾರ] ಅಂತ್ಯವಾಗಿದೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಒಟ್ಟು 340 ಅಭ್ಯರ್ಥಿಗಳಿಂದ 452 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 37 ಅಭ್ಯರ್ಥಿಗಳಿಂದ 46 ನಾಮಪತ್ರ ಸಲ್ಲಿಕೆಯಾಗಿವೆ.

ಇನ್ನು ಬೆಂಗಳೂರು ದಕ್ಷಿಣದಲ್ಲಿ 36 ಅಭ್ಯರ್ಥಿಗಳು 41 ನಾಮಪತ್ರಗಳನ್ನು ಸಲ್ಲಿಸಿದ್ದು, ಮೈಸೂರಿನಲ್ಲಿ 34 ಅಭ್ಯರ್ಥಿಗಳು 49 ನಾಮಪತ್ರ ಸಲ್ಲಿಸಿದ್ದಾರೆ.

2014 ರಲ್ಲಿ 14 ಲೋಕಸಭೆ ಕ್ಷೇತ್ರಗಳಲ್ಲಿ 306 ನಾಮಪತ್ರ ಸಲ್ಲಿಕೆಯಾಗಿದ್ದು,. 233 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ 14 ಲೋಕಸಭೆಗೆ ಮಾತ್ರ ಹೊಲಿಸಿದರೆ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇನ್ನು ನಾಳೆ [ಬುಧವಾರ] ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ. 29 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 23ಕ್ಕೆ ಮತ ಎಣಿಕೆ ನಡೆಯಲಿದೆ.

Comments are closed.