ಮಂಡ್ಯ: ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಹಾಗೂ ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಮತ್ತು ಅವರ ಸಂಬಂಧಿಕರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಪುಟ್ಟರಾಜು ಸ್ವಗ್ರಾಮ ಮೈಸೂರಿನ ಚಿನಕುರಳಿಯಲ್ಲಿರುವ ಮನೆ ಮೇಲೆ ಬೆಳಗ್ಗೆ ಐಟಿ ದಾಳಿ ನಡೆದಿದ್ದು, ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅಣ್ಣನ ಮಗ ಅಶೋಕ್ ಮನೆ ಮೇಲೆಯೂ ದಾಳಿ ನಡೆದಿದೆ. ನಸುಕಿನ ಜಾವದಿಂದ ಪುಟ್ಟರಾಜು ನಿವಾಸ, ಸಂಬಂಧಿಗಳ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಸಚಿವ ಪುಟ್ಟರಾಜು ಅವರ ಮನೆಗೆ ಒಟ್ಟು ಮೂರು ಕಾರುಗಳಲ್ಲಿ ಆಗಮಿಸಿರುವ ಐಟಿ ಆಧಾರಿಗಳು ಸತತ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅಂತೆಯೇ ಅಧಿಕಾರಿಗಳು ತಮ್ಮೊಂದಿಗೆ ಸಿಆರ್ ಪಿಎಫ್ ಸೈನಿಕರನ್ನು ಭದ್ರತೆಗಾಗಿ ಕರೆತಂದಿದ್ದಾರೆ.
Comments are closed.