ಬೆಂಗಳೂರು: ಗುರುವಾರ ಐಟಿ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ 2 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಪ್ತ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಸೇರಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಮನೆ, ಕಚೇರಿ, ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿ ಸೇರಿದಂತೆ ಸುಮಾರು 27 ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದರು.
ಇದು ರಾಜಕೀಯ ಪ್ರೇರಿತ ದಾಳಿ ಎಂದು ಕುಮಾರಸ್ವಾಮಿ ಆರೋಪಿಸಿದ್ದರು ಮಾತ್ರವಲ್ಲದೆ ಪ್ರಮುಖ ನಾಯಕರೆಲ್ಲೂರೂ ಸೇರಿ ಐಟಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿ ಕಾರಿದ್ದರು.
ಐಟಿ ಇಲಾಖೆ ಸರ್ಕಾರದ ಆರೋಪಕ್ಕೆ ಸ್ಪಷ್ಟನೆ ನೀಡದ್ದು ದಾಳಿ ರಾಜಕೀಯ ಪ್ರೇರಿತವಲ್ಲ ಎಂದಿದೆ.
Comments are closed.