ಕರ್ನಾಟಕ

ಚಿರಂಜೀವಿ ಸರ್ಜಾ ಅಭಿನಯದ ರಣಂ ಶೂಟಿಂಗ್ ಸಂದರ್ಭ ಸಿಲಿಂಡರ್ ಸ್ಫೋಟ: ಇಬ್ಬರ ದಾರುಣ ಸಾವು!

Pinterest LinkedIn Tumblr


ಬಾಗಲೂರು: ಸಿನಿಮಾ ಶೂಟಿಂಗ್ ವೇಳೆ ಸಿಲಿಂಡರ್ ಸ್ಪೋಟಿಸಿ ಓರ್ವ ಮಹಿಳೆ ಮತ್ತು ಮಗು ಮೃತಪಟ್ಟು ಓರ್ವ ಯುವತಿ ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ಚಿರಂಜೀವಿ ಸರ್ಜಾ ಅಭಿನಯದ ರಣಂ ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಸ್ಪೋಟದ ರಭಸಕ್ಕೆ ದೇಹಗಳು ಛಿದ್ರ ಛಿದ್ರವಾಗಿವೆ.

ಇನ್ನು ಘಟನೆ ನಡೆಯುತ್ತಿದ್ದಂತೇ ಚಿತ್ರೀಕರಣ ಅರ್ಧಕ್ಕೆ ನಿಲ್ಲಿಸಿ ಚಿತ್ರತಂಡ ಸ್ಥಳದಿಂದ ಪರಾರಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳ ಮತ್ತು ಪೊಲೀಸರು ರಕ್ಷಣಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.

ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡುತ್ತಿರುವ ರಣಂ ಚಿತ್ರದಲ್ಲಿ ಚಿರಂಜೀವಿ ಸರ್ಜಾ, ಚೇತನ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.

ಈ ಹಿಂದೆ ನಟ ದುನಿಯಾ ವಿಜಿ ಅಭಿನಯದ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ಕೆರೆಯಲ್ಲಿ ಮುಳುಗಿ ಸಹ ನಟರಾದ ಉದಯ್ ಮತ್ತು ಅನಿಲ್ ದುರಂತ ಸಾವು ಕಂಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Comments are closed.