ಕರ್ನಾಟಕ

ಬಿಜೆಪಿ 12ನೇ ಪಟ್ಟಿಯಲ್ಲಿ ರಾಜ್ಯದ ಮೂರು ಕ್ಷೇತ್ರಗಳು: ಕೊಪ್ಪಳದಿಂದ ಕರಡಿ ಸಂಗಣ್ಣ, ಕತ್ತಿ ಕುಟುಂಬಕ್ಕೆ ತಪ್ಪಿದ ಚಿಕ್ಕೋಡಿ!

Pinterest LinkedIn Tumblr


ನವದೆಹಲಿ: ಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 12ನೇ ಪಟ್ಟಿ ಬಿಡುಗಡೆ ಮಾಡಿದ್ದು, ಉತ್ತರ ಕರ್ನಾಟಕದ 3 ಕ್ಷೇತ್ರಗಳೂ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನದ ಹಲವು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪ್ರಕಟಿಸಿದೆ.
ಬಿಜೆಪಿಯ ಈ 12ನೇ ಪಟ್ಟಿಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳೂ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನದ ಒಟ್ಟು 11ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕದ ಚಿಕ್ಕೋಡಿ, ಕೊಪ್ಪಳ ಮತ್ತು ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪ್ರಕಟಿಸಿದ್ದು, ಚಿಕ್ಕೋಡಿ ಕ್ಷೇತ್ರದಿಂದ ಅಣ್ಣಾ ಸಾಹೆಬ್ ಜೊಲ್ಲೆ ಅವರನ್ನು ಕಣಕ್ಕಳಿಸಲಾಗಿದೆ. ಅಂತೆಯೇ ಕೊಪ್ಪಳ ಕ್ಷೇತ್ರದಿಂದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನೀಡಲಾಗಿದ್ದು, ರಾಯಚೂರು ಕ್ಷೇತ್ರದಿಂದ ರಾಜಾ ಅಮರೇಶ್ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ.
ಉಳಿದಂತೆ ಜಮ್ಮು ಮತ್ತು ಕಾಶ್ಮೀರದ ಲಡಾಕ್ ನಿಂದ ಜಮ್ಯಂಗ್ ತ್ಸೆರಿಂಗ್ ನಮಗ್ಯಾಯ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಮಧ್ಯ ಪ್ರದೇಶದ ಬಾಲಾಘಾಟ್, ರಾಜ್ ಘಡ್ ಮತ್ತು ಖರ್ ಗೋಂವ್ ಕ್ಷೇತ್ರಗಳಿಗೆ ಅಭ್ಯರ್ಥಿಗಳಿಗೆ ಘೋಷಣೆ ಮಾಡಲಾಗಿದೆ. ಅಂತೆಯೇ ಮಹಾರಾಷ್ಟ್ರದ ಮಾಧಾ ಕ್ಷೇತ್ರ, ರಾಜಸ್ತಾನದ ಚುರು, ಆಳ್ವಾರ್ ಮತ್ತು ಬನ್ಸವರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

Comments are closed.