ಕರ್ನಾಟಕ

ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದ ಬಂಡಾಯ ಅಭ್ಯರ್ಥಿ ಮುದ್ದಹನುಮೇಗೌಡ: ನಾಮಪತ್ರ ಹಿಂಪಡೆಯಲು ನಿರ್ಧಾರ; ದೇವೇ ಗೌಡರಿಗೆ ನಿರಾಳ

Pinterest LinkedIn Tumblr


ತುಮಕೂರು: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಮಾನಸಿಕವಾಗಿ ಬೇಸರಗೊಂಡಿರುವ ಮುದ್ದಹನುಮೇಗೌಡ ಈ ಸಂಬಂಧ ತಮ್ಮ ಆಪ್ತ ರಾಯಸಂದ್ರ ರವಿಕುಮಾರ್ ಅವರಿಗೆ ಸೂಚನೆ ನೀಡಿದ್ದು, ಡಿಸಿ ಕಚೇರಿಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಹೇಳಿದ್ದಾರೆ.
ಇಂದು ಬೆಳಗ್ಗೆ ಸಂಜಯನಗರದಲ್ಲಿರುವ ಮುದ್ದಹನುಮೇಗೌಡ ಅವರ ನಿವಾಸಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಪರಮೇಶ್ವರ್ ಚರ್ಚಿಸಿ ಮನವೊಲಿಸಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗದಂತ ಯಾವ ನಿರ್ಧಾರವನ್ನು ಕೈಗೊಳ್ಳದಂತೆ ಮುದ್ದಹನುಮೇಗೌಡರಲ್ಲಿ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ ಮುದ್ದ ಹನುಮೇಗೌಡರು ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.

Comments are closed.