ಕರ್ನಾಟಕ

ತೇಜಸ್ವಿನಿಗೆ ತಪ್ಪಿದ ಟಿಕೆಟ್: ಮನವೊಲಿಕೆಗೆ ಮುಂದಾದ ಯಡಿಯೂರಪ್ಪ!

Pinterest LinkedIn Tumblr


ಬೆಂಗಳೂರು: ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ,
ತೇಜಸ್ವಿ ಸೂರ್ಯ ಅವರಿಗೆ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದು ಮಾಜಿ ಡಿಸಿಎಂ ಆರ್. ಅಶೋಕ ಅವರಿಗೆ ಬೇಸರ ತರಿಸಿದೆ, ಯಡಿಯೂರಪ್ಪ ಅವರು ಖಾಸಗಿಯಾಗಿ ಮನೆಗೆ ಕರೆಸಿಕೊಂಡು ಸಮಾಧಾನ ಪಡಿಸಿದ್ದಾರೆ ಎನ್ನಲಾಗಿದೆ,
ತೇಜಸ್ವಿ ಸೂರ್ಯ ಅವರ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ,ಅಸಮಾಧಾನಕ್ಕಿಂತ ಮೋದಿ ಅಲೆ ಮುಖ್ಯವಾಗಿದೆ, ತೇಜಸ್ವಿ ಸೂರ್ಯ ಪರವಾಗಿ ತೇಜಸ್ವಿನಿ ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ಯಡಿಯೂರಪ್ಪ ಅವರ ಮನವೊಲಿಕೆಗೆ ಕರಗಿರುವ ಅಶೋಕ್ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸ್ಥಳೀಯ ನಾಯಕರ ಸಭೆ ನಡೆಸಿದರು.

Comments are closed.