ಕರ್ನಾಟಕ

ಬಿಜೆಪಿ 22 ಸ್ಥಾನ ಗೆದ್ರೆ, ಮರುದಿನ ಕುಮಾರಸ್ವಾಮಿ ಮನೆಗೆ: ಮೊಯ್ಲಿ

Pinterest LinkedIn Tumblr


ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೇನಾದರೂ 22 ಸ್ಥಾನ ಬಂದರೆ ಮರುದಿನವೇ ಜೆಡಿಎಸ್ ನ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಹೋಗ್ತಾರೆ ಎಂದು ಮೈತ್ರಿ ಅಭ್ಯರ್ಥಿ ಡಾ. ಎಂ ವೀರಪ್ಪಮೊಯ್ಲಿ ಹೇಳಿದರು.
ಚಿಕ್ಕಬಳ್ಳಾಪುರ ಮೈತ್ರಿ ಅಭ್ಯರ್ಥಿಯಾಗಿರುವ ವೀರಪ್ಪಮೊಯ್ಲಿ ಅವರು ಬಾಗೇಪಲ್ಲಿಯ ತಿಮ್ಮಂಪಲ್ಲಿಯಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾತನಾಡಿ, ಬಿಎಸ್ ಯಡಿಯೂರಪ್ಪ ಅವರ ಕಣ್ಣು ಮುಖ್ಯಮಂತ್ರಿ ಕುರ್ಚಿ ಮೇಲೆ ಬಿದ್ದಿದೆ. ಅದಕ್ಕಾಗಿ ಅವರು ಒಂದಲ್ಲಾ ಒಂದು ರೀತಿಯಲ್ಲಿ ಸಮಿಶ್ರ ಸರ್ಕಾರವನ್ನು ಉರುಳಿಸುವ ಶತಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಮತದಾರರಲ್ಲಿ ಮನವಿ ಮಾಡಿದರು.
ಕೋಮುವಾದಿ ಬಿಜೆಪಿಯನ್ನು ದೂರವಿಡಲು ಹಾಗೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ನನಸಾಗದಂತೆ ಮಾಡಲು ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ವೀರಪ್ಪ ಮೊಯ್ಲಿ ಕೇಳಿಕೊಂಡರು.

Comments are closed.