ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪ್ರಚಾರ ಮಾಡಿದ ಶಿಕ್ಷಕನಿಗೆ ಸಿಕ್ಕಿದ ಶಿಕ್ಷೆ ಏನು ಗೊತ್ತೇ..?

Pinterest LinkedIn Tumblr

ಬೆಂಗಳೂರು: ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡಿದ ಆರೋಪದಡಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲ್ಲೂಕಿನ ದೇವಲಗಾಣಗಾಪುರದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮಣ ಅವರು ಸೋಷಿಯಲ್ ಮೀಡಿಯಾಗಳಲ್ಲಿ ಮಾರ್ಚ್ 1ರಿಂದ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದರು.

ಜನಪ್ರತಿನಿಧಿ ಕಾಯ್ದೆ 1951ರಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕನನ್ನು ಹುದ್ದೆಯಿಂದ ಅಮಾನತುಗೊಳಿಸಿ ತನಿಖೆ ಕೈಗೊಂಡಿದೆ. ಕರ್ನಾಟಕ ನಾಗರಿಕ ಸೇವೆ ಕಾಯ್ದೆ 1966ರಡಿ ಮುಖ್ಯೋಪಾಧ್ಯಾಯರು ಸೇವೆಯಿಂದ ಅಮಾನತುಗೊಂಡಿದ್ದಾರೆ.

ಈ ಕಾಯ್ದೆಯಡಿ ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದ ಪರ ಪ್ರಚಾರ ಮಾಡುವುದು, ಕೆಲಸ ಮಾಡುವುದಾಗಲಿ ಅಥವಾ ಗುರುತಿಸಿಕೊಳ್ಳುವಂತಿಲ್ಲ.

Comments are closed.