ಮಂಡ್ಯ: ಜನ ಬೆಂಬಲ ಸಹಿಸದೇ ವಿರೋಧಿಗಳು ನನ್ನ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗದ್ಗದಿತರಾದರು.
ಮದ್ದೂರು ತಾಲೂಕಿನ ಎಚ್.ಹೊಸೂರು ಗ್ರಾಮದಲ್ಲಿ ಎತ್ತಿನ ಗಾಡಿಯಲ್ಲಿ ರೋಡ್ ಶೋ ನಡೆಸಿ ಭಾಷಣ ಮಾಡುವ ವೇಳೆ ಕಣ್ಣಂಚಿನಲ್ಲಿ ನೀರು ತುಂಬಿಕೊಂಡ ನಿಖಿಲ್, ಈಚುನಾವಣೆಯಲ್ಲಿ ನನ್ನನ್ನು ಹಣಿಯಲು ವಿರೋಧಿಗಳು ತಂತ್ರ ರೂಪಿಸಿದ್ದಾರೆ. ಅದು ಎಂದಿಗೂ ಫಲಿಸುವುದಿಲ್ಲ ಎಂದು ಭಾವುಕರಾದರು.
ಸೋಮನಹಳ್ಳಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ನಿಖಿಲ್, ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾಧಿಕಾರಿ ಕಚೇರಿಯನ್ನು ನಡೆಸುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಏನಿದೆ? ಎಂದರು.
Comments are closed.