ಕರ್ನಾಟಕ

ಉಮೇಶ್ ಜಾಧವ್ ರಾಜೀನಾಮೆ ಕೊನೆಗೂ ಅಂಗೀಕಾರ!

Pinterest LinkedIn Tumblr


ಬೆಂಗಳೂರು:ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸಮಧಾನಗೊಂಡು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದ ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಸೋಮವಾರ ಅಂಗೀಕರಿಸಿದ್ದಾರೆ.

ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರು ಮಾರ್ಚ್ 4ರಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಕಲಬುರಗಿಯಲ್ಲಿ ನಡೆದಿದ್ದ ಬಿಜೆಪಿ ಸಮಾವೇಶದಲ್ಲಿ ಜಾಧವ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

Comments are closed.