ದಾವಣಗೆರೆ: ಲೋಕಸಭೆ ಚುನಾವಣೆ ನಂತರ ಬಿ.ಎಸ್.ಯಡಿಯೂರಪ್ಪ ಅವರಿಗೆ ಇರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹೋಗಲಿದ್ದು, ಮನೆಗೆ ಹೋಗುತ್ತಾನೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
ಈ ಮೂಲಕ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಈಗಾಗಲೇ ಗೆದ್ದಾಗಿದೆ ಎಂದು ಹೇಳಿಕೆ ನೀಡಿದ ಬಿಎಸ್ವೈಗೆ ತಿರುಗೇಟು ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಯಡಿಯೂರಪ್ಪಗೆ ಇರುವ ಸ್ಥಾನವೂ ಹೋಗಲಿದೆ.
ಹೀಗಾಗಿ ಅವರ ಮುಂದಿನ ಜೀವನ ಹೇಗಿರುತ್ತೆ ಅನ್ನುವುದನ್ನು ನೋಡೋಣ. ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾವು ಸಾಮಾನ್ಯ ವ್ಯಕ್ತಿಯನ್ನು ನಿಲ್ಲಿಸಿದ್ದೇವೆ. ನಮ್ಮ ಅಭ್ಯರ್ಥಿಯ ಗೆಲುವು ಖಚಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
Comments are closed.