ಕರ್ನಾಟಕ

ಹಾಸನದಲ್ಲಿ ಯುವಕನಿಂದ ಸೈಕಲ್ ನಲ್ಲಿ 25 ಲಕ್ಷ ಸಾಗಟ!

Pinterest LinkedIn Tumblr


ಹಾಸನ/ಚಿಕ್ಕಮಗಳೂರು: ದಾಖಲೆ ಇಲ್ಲದ ಸಾಗಿಸುತ್ತಿದ್ದ ಸುಮಾರು 45 ಲಕ್ಷ ರೂಪಾಯಿ ಹಣವನ್ನು ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ತಪಾಸಣೆ ನಡೆಸಿದ ವೇಳೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಹಾಸನದ ಹೊಳೆನರಸೀಪುರದಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಬೈಕ್ ನಲ್ಲಿ ಯುವಕನೊಬ್ಬ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವುದಾಗಿ ಖಾಸಗಿ ಚಾನೆಲ್ ಗಳ ವರದಿ ತಿಳಿಸಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದಾಗಿ ವರದಿ ಹೇಳಿದೆ.

ಮತ್ತೊಂದೆಡೆ ಚಿಕ್ಕಮಗಳೂರಿನ ಗೌರಿಬಿದನೂರು ಜಿಲ್ಲೆಯ ಹುದಗೂರಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂಡಿಕಾ ಕಾರಿನಲ್ಲಿ 20 ಲಕ್ಷ ರೂಪಾಯಿ ನಗದು ಸಿಕ್ಕಿರುವುದಾಗಿ ಖಾಸಗಿ ಟಿವಿ ವಾಹಿನಿಗಳ ವರದಿ ತಿಳಿಸಿದೆ. ಹಣದ ದಾಖಲೆ ಬಗ್ಗೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಒಟ್ಟು 45 ಲಕ್ಷ ರೂಪಾಯಿ ಹಣ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಹೇಳಿರುವುದಾಗಿ ವರದಿ ವಿವರಿಸಿದೆ.

Comments are closed.