ಕರ್ನಾಟಕ

ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ: ಕುಮಾರಸ್ವಾಮಿ

Pinterest LinkedIn Tumblr


ಚಿಕ್ಕಮಗಳೂರು: ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.
ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‍ನನ್ನು ಸೋಲಿಸಲು ರೂಪಿಸಿರುವ ಚಕ್ರವ್ಯೂಹಕ್ಕೆ ಮೇ.23ರಂದು ಚುನಾವಣಾ ಫಲಿತಾಂಶ ಹೊರಬಂದ ನಂತರ ಸೂಕ್ತ ಉತ್ತರ ನೀಡುವುದಾಗಿ ಹೇಳಿದರು.
ಕಳೆದ ಮೂರು ತಿಂಗಳಿನಿಂದಲೂ ಮಂಡ್ಯದಲ್ಲಿ ಜೆಡಿಎಸ್ ಮಣಿಸಲು ಕಾರ್ಯತಂತ್ರವನ್ನು ಹೆಣೆಯಲಾಗಿದೆ. ಆದರೆ ಸ್ಥಳೀಯ ಪರಿಸ್ಥಿತಿಯೇ ಭಿನ್ನವಾಗಿದೆ. ಯಾರು ಸರಿಯಾದ ದುಡಿಮೆ ಮಾಡುತ್ತಾರೆ ಎಂಬುದು ಅಲ್ಲಿನ ಜನರಿಗೆ ಗೊತ್ತಿದೆ. ದುಡಿಮೆ ಮಾಡುವವರನ್ನು ಜನರು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Comments are closed.