ಕರ್ನಾಟಕ

5 ಲಕ್ಷ ಮತದ ಅಂತರದಲ್ಲಿ ಪುತ್ರ ನಿಖಿಲ್ ಗೆ ಜಯ: ಕುಮಾರಸ್ವಾಮಿ

Pinterest LinkedIn Tumblr


ಕೊಪ್ಪ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್‌ 5 ಲಕ್ಷ ಮತಗಳ ಅಂತರದಲ್ಲಿ ಗೆಲವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಅಭ್ಯರ್ಥಿ ವಿರುದ್ಧ ಇತರೆ ಪಕ್ಷದವರು ಸೇರಿಕೊಂಡು ಚಕ್ರವ್ಯೂಹ ರಚನೆ ಮಾಡಿದ್ದು ಮಂಡ್ಯದ ಜನ ಎಲ್ಲವನ್ನೂ ಮೆಟ್ಟಿನಿಲ್ಲುತ್ತಾರೆ ಎಂದರು.

ಮಂಡ್ಯದಲ್ಲಿ ಹೆಸರಿಗೆ ಪಕ್ಷೇತರ ಅಭ್ಯರ್ಥಿಯಷ್ಟೇ ಕಾಂಗ್ರೆಸ್‌, ಬಿಜೆಪಿ, ರೈತ ಸಂಘದ ಜತೆಗೆ ದೃಶ್ಯ ಮಾಧ್ಯಮದ ಬೆಂಬಲ ಅವರಿಗಿದೆ. ಕಳೆದ ಮೂರು ತಿಂಗಳಿಂದ ಮಂಡ್ಯ ಕ್ಷೇತ್ರದ ಬಗ್ಗೆ ಹಲವು ಸುದ್ದಿಗಳು ಬರುತ್ತಿವೆ. ಆದರೆ, ಅಲ್ಲಿರುವ ವಾಸ್ತವವೇ ಬೇರೆ. ಮೇ 23ರ ನಂತರ ಉತ್ತರ ನೀಡುತ್ತೇವೆ ಎಂದು ಹೇಳಿದರು.

ನಾನು ಕೇವಲ ಮಂಡ್ಯದಲ್ಲಿ ಪ್ರಚಾರ ಮಾಡುತ್ತಿದ್ದೇನೆಂದು ಹೇಳುತ್ತಿದ್ದಾರೆ. ಕಾರವಾರ, ಶಿವಮೊಗ್ಗ ಕ್ಷೇತ್ರಗಳನ್ನು ಮುಗಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯವನ್ನು ಸುತ್ತುತ್ತೇನೆ ಎಂದರು. ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರಚಾರ ಮಾಡಿದರೂ ಪ್ರಯೋಜನವಿಲ್ಲ ಎಂಬ ಜೆಡಿಎಸ್‌ ವರಿಷ್ಠ​​​​​ ಎಚ್‌.ಡಿ. ದೇವೇಗೌಡ ಅವರು ಹೇಳಿಕೆಯನ್ನು ಸಿಎಂ ಗಮನಕ್ಕೆ ತಂದಾಗ, ಅವರು ಹೇಳಿರುವುದು ಸರಿಯಾಗಿದೆ ಎಂದರು.

Comments are closed.