ಕರ್ನಾಟಕ

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಬೆಂಬಲಿಗ ವ್ಯಾಪಾರಿಗಳ ಮೇಲೆ ಐಟಿ ದಾಳಿ

Pinterest LinkedIn Tumblr

ಬೆಂಗಳೂರು: ರಾಜ್ಯದ ಪ್ರಭಾವಿ ರಾಜಕೀಯ ನಾಯಕರು ಮತ್ತು ಅವರ ಆಪ್ತರ ನಿವಾಸ ಮತ್ತು ಕಚೇರಿ ಮೇಲೆ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ.

ತೆರಿಗೆ ತಪ್ಪಿಸಿರುವ ಆರೋಪ ಸಂಬಂಧ ಹಲವು ದೂರುಗಳು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ನಗರದ 20 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧಿಸಲಾಗುತ್ತಿದೆ ಎಂದು ಆದಾಯ ತೆರಿಗೆ ಅಧಿಕಾರಿಗಳ ಮೂಲಗಳು ಹೇಳಿವೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರಿಗೆ ಸೇರಿದ ಡಿಕನ್ಸನ್ ರಸ್ತೆಯಲ್ಲಿರುವ ಕಾಂಗ್ರೆಸ್​ ಪ್ರಚಾರ ಕಚೇರಿಯ ಜೊತೆಗೆ ರಿಜ್ವಾನ್​ ಆಪ್ತರಾಗಿರುವ ಮೂವರು ಉದ್ಯಮಿಗಳಾದ ಅಮಾನುಲ್ಲಾ ಖಾನ್​, ಖಮಲ್ ಪಾಷಾ ಹಾಗೂ ನಯೀಜ್ ಖಾನ್​ ಮೇಲೆ ಕೂಡ ಐಟಿ ದಾಳಿ ನಡೆದಿದ್ದು, ಮಹತ್ವದ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ.

ಪ್ಯಾಲೇಸ್​ ಡೆಕೋರೇಷನ್​ ಉದ್ಯಮ ನಡೆಸುತ್ತಿರುವ ಅಮಾನುಲ್ಲಾ ಖಾನ್​, ಗೋಲ್ಡನ್ ಆರ್ಚರಿ ಉದ್ಯಮಿ ಕಮಲ್ ಪಾಷಾ ಹಾಗೂ ರಿಯಲ್​ ಎಸ್ಟೇಟ್​ ಉದ್ಯಮಿ ನಯೀಜ್ ಖಾನ್​ ರಿಜ್ವಾನ್​ ಅರ್ಷದ್​​​ಗೆ ಆಪ್ತರಾಗಿರುವ ಹಿನ್ನೆಲೆಯಲ್ಲಿ ಅವರ ಮೇಲೆ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ದಾಳಿ ಕುರಿತು ಪ್ರತಿಕ್ರಿಯಿಸಿರುವ ಅಭ್ಯರ್ಥಿ ರಿಜ್ವಾನ್ ಅರ್ಶದ್, ರಾಜಕೀಯ ಪ್ರೇರಿತ ದಾಳಿ ಎಂದು ಪ್ರತಿಕ್ರಿಯಿಸಿದ್ದಾರೆ.

Comments are closed.