ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಫಲಿತಾಂಶ ಏಪ್ರಿಲ್ 15 (ನಾಳೆ) ರಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.
ಸೋಮವಾರ ಪಿಯು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲಾ ಕಾಲೇಜುಗಳಲ್ಲಿ ಮಂಗಳವಾರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳು http://pue.kar.nic.in/ ಮತ್ತು http://www.karresults.nic.in/ ವೆಬ್ಸೈಟಿನ ಮೂಲಕ ಫಲಿತಾಂಶ ನೋಡಬಹುದು.
2019ನೇ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಮಾರ್ಚ್ನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಇವರಲ್ಲಿ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಪಿಯು ಫಲಿತಾಂಶ ಸಿಇಟಿ ಪರೀಕ್ಷೆಗೂ ಮುನ್ನ ಪ್ರಕಟವಾಗುತ್ತಿದೆ. ಸಿಟಿಟಿ ಪರೀಕ್ಷೆಯೂ ಏಪ್ರಿಲ್ 29, 30 ಮತ್ತು ಮೇ 1ರಂದು ನಡೆಯಲಿದೆ.
ನಾಳೆ ಬೆಳಗ್ಗೆ 11ಗಂಟೆಗೆ ಪಿಯು ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12 ಗಂಟೆಗೆ ವೆಬ್ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 16ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಸಿ.ಶಿಖಾ ಮಾಹಿತಿ ನೀಡಿದ್ದಾರೆ.
ಫಲಿತಾಂಶ ನೋಡಲು ಹೀಗೆ ಮಾಡಿ
- ಅಧಿಕೃತ ವೆಬ್ಸೈಟ್ http://pue.kar.nic.in/ ಮತ್ತು http://www.karresults.nic.in/ ಲಾಗ್ ಆನ್ ಮಾಡಿ
- ಹೋಮ್ ಪೇಜ್ನಲ್ಲಿ ‘Karnataka PUC Result 2019’ ಕ್ಲಿಕ್ ಮಾಡಿ
- ನಿಗದಿತ ಸ್ಥಳದಲ್ಲಿ ನಿಮ್ಮ ನೋಂದಾಯಿತ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ
- ಸಬ್ಮಿಟ್ ಬಟನ್ ಕ್ಲಿಕ್ ಮಾಡಿ
Comments are closed.