ಕರ್ನಾಟಕ

ಮೋದಿ ಮಾಡಲಾಗದ್ದನ್ನು ನಾವು ಮಾಡಿ ತೋರಿಸುತ್ತೇವೆ; ರಾಹುಲ್ ಗಾಂಧಿ

Pinterest LinkedIn Tumblr


ರಾಯಚೂರು: ಇಂದು ರಾಯಚೂರಿನಲ್ಲಿ ಕಾಂಗ್ರೆಸ್- ಜೆಡಿಎಸ್​​ ಲೋಕಸಭಾ ಮೈತ್ರಿ ಅಭ್ಯರ್ಥಿ ಬಿ.ವಿ. ನಾಯಕ್ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಆಗಮಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಚುನಾವಣೆ 2 ವಿಚಾರಧಾರೆಗಳ ನಡುವಿನ ಹೋರಾಟವಾಗಿದೆ. ಅನ್ಯಾಯ, ಸುಳ್ಳು ಮತ್ತು ಸತ್ಯದ ಹೋರಾಟವಾಗಿದೆ. ಮೋದಿ ಹೋದಲ್ಲೆಲ್ಲ ಸುಳ್ಳು ಹೇಳುತ್ತಾರೆ. ಎಲ್ಲರ ಖಾತೆಗೆ 15 ಲಕ್ಷ ರೂ. ನೀಡುತ್ತೇನೆ ಎಂದರು. ಆದರೆ, 1 ರೂ. ಕೂಡ ನೀಡಲಿಲ್ಲ. ಇದೇ ಕಾರಣಕ್ಕೆ ನ್ಯಾಯ್ ಯೋಜನೆಯನ್ನು ಜಾರಿಗೆ ತರುತ್ತೇವೆ. ಪ್ರತಿ ವರ್ಷ 5 ಕೋಟಿ ಜನರ ಖಾತೆಗೆ 72 ಸಾವಿರ ರೂ. ಹಾಕುತ್ತೇವೆ. ಮೋದಿಗೆ ಮಾಡಲಾಗದ್ದನ್ನು ನಾವು ಮಾಡಿ ತೋರಿಸುತ್ತೇವೆ ಎಂದು ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ.

ನಾವು ರೈತರ ಸಾಲ ಮನ್ನಾ ಭರವಸೆ ನೀಡಿದ್ದೆವು. ನಮ್ಮ ಸರ್ಕಾರವಿರುವ ರಾಜ್ಯಗಳಲ್ಲಿ ಸಾಲಮನ್ನಾ ಮಾಡಲಾಗಿದೆ. ನಮ್ಮದು ನುಡಿದಂತೆ ನಡೆದ ಪಕ್ಷ. 10 ದಿನಗಳಲ್ಲಿ ರೈತರ ಸಾಲಮನ್ನಾ ಮಾಡುತ್ತೇವೆ ಎಂದಿದ್ದೆವು. ಆದರೆ, ಅಧಿಕಾರಕ್ಕೆ ಬಂದ ಎರಡೇ ದಿನದಲ್ಲಿ ಸಾಲಮನ್ನಾ ಮಾಡಿದೆವು. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಸಾಲಮನ್ನಾ ಮಾಡಲಾಗಿದೆ. ಮೋದಿ ಹಿಂದೆ ನೀಡಿದ ಭರವಸೆಗಳನ್ನು ಮರೆತಿದ್ದಾರೆ. ಈಗ ರಾಷ್ಟ್ರೀಯ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ. ಗ್ರಾಮ, ನಗರದಲ್ಲೂ ಚೌಕಿದಾರ್ ಕಳ್ಳ ಎಂಬ ಘೋಷಣೆ ಕೇಳಿಬರುತ್ತಿದೆ ಎಂದು ಮೋದಿ ವಿರುದ್ಧ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರ ಬಂದರೆ ಜಿಎಸ್​ಟಿ ಸರಳೀಕರಣಗೊಳಿಸುತ್ತೇವೆ. ಸಾಲ ಕಟ್ಟದ ಉದ್ಯಮಿಗಳು ಪರಾರಿಯಾಗಿದ್ದಾರೆ. ಆದರೆ ಸಾಲ ಕಟ್ಟದ ರೈತರನ್ನು ಬಂಧಿಸುತ್ತಿದ್ದಾರೆ. ನಮ್ಮ ಸರ್ಕಾರ ಬಂದರೆ ಕಾನೂನನ್ನು ಬದಲಿಸುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಗ್ರಾಮ ಪಂಚಾಯಿತಿಗಳಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ರಾಹುಲ್ ಭರವಸೆ ನೀಡಿದ್ದಾರೆ.

Comments are closed.