ಬೆಂಗಳೂರು: ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಕೊಪ್ಪಳ, ಕಲಬುರಗಿ. ರಾಯಚೂರು, ಬೀದರ್, ಧಾರವಾಡ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತಯಂತ್ರ ದೋಷದಿಂದಾಗಿ ವಿಳಂಬವಾಗಿ ಮತದಾನ ಪ್ರಾರಂಭವಾಗಿದೆ.
ಮತದಾರರು ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುತ್ತಿರುವ ದೃಶ್ಯ ಕಂಡುಬರುತ್ತಿದೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ತಮ್ಮ ಹಕ್ಕು ಚಲಾಯಿಸಿದರು.
ದಾವಣೆಗೆರೆ ಕೈ ಅಭ್ಯರ್ಥಿ ಹೆಚ್ ಬಿ.ಮಂಜಪ್ಪ ಹೊನ್ನಾಳ್ಳಿ ಪಟ್ಟಣದಲ್ಲಿರುವ 101 ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮತದಾನ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ
Comments are closed.