ಕರ್ನಾಟಕ

ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಫೇಲಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿದ ಭರವಸೆ ನೋಡಿ….

Pinterest LinkedIn Tumblr

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಈ ಬಾರಿ ಫಲಿತಾಂಶ ಶೇ. 1.8ರಷ್ಟು ಹೆಚ್ಚಳಗೊಂಡಿದ್ದು, ಶೇ.73.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಇನ್ನು ಶೇ 27.30 ರಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಫೇಲ್​ ಆದ ವಿದ್ಯಾರ್ಥಿಗಳು ನಿರಾಸೆ ಹೊಂದಿ ಜೀವನದಲ್ಲಿ ಎಲ್ಲಾ ಮುಗಿದು ಹೋಯಿತು ಎಂದು ಆತಂಕ ಪಡುವ ಅಗತ್ಯವಿಲ್ಲ. ಎಸ್​ಎಸ್​ಎಲ್​ಸಿ ಎಂಬುದು ವಿದ್ಯಾರ್ಥಿ ಜೀವನದ ಒಂದು ಘಟ್ಟ ಅಷ್ಟೇ. ಅದೇ ಜೀವನ ಅಲ್ಲ ಎಂಬುದು ವಿದ್ಯಾರ್ಥಿಗಳಲ್ಲಿ ಅರಿತುಕೊಳ್ಳಬೇಕು.

ವಿದ್ಯಾರ್ಥಿಗಳು ಫೇಲ್​ ಆಯಿತು ಎಂದು ಬೇಸರ ಪಟ್ಟುಕೊಳ್ಳುವ ಬದಲು ಮುಂದಿನ ಬಾರಿ ಹೆಚ್ಚಿನ ಪರಿಶ್ರಮವಹಿಸಿ ಪರೀಕ್ಷೆ ಎದುರಿಸಿದರೆ ಜೀವನದಲ್ಲಿ ಯಶಸ್ವಿಯಾಗುವುದು ಖಂಡಿತ. ಈ ಬಗ್ಗೆ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಧೃತಿಗೆಡಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆತ್ಮಸ್ಥೈರ್ಯದ ಮಾತುಗಳನ್ನು ನಪಾಸಾದ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ.

ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭಾಶಯ ಹೇಳುವ ಜೊತೆಗೆ ಎಸ್​ಎಸ್​ಎಸ್​ಸಿ ಪೂರಕ ಪರೀಕ್ಷೆಗೆ ಅವಕಾಶ ಇದ್ದು, ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ಉತ್ತೀರ್ಣ ಅಭ್ಯರ್ಥಿಗಳ ಜೊತೆಯೇ ಕಾಲೇಜು ಮೆಟ್ಟಿಲು ಹತ್ತಬಹುದು. ಹೀಗಾಗಿ ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಸಲಹೆ ನೀಡಿದ್ದಾರೆ.

ಇದರ ಜೊತೆ ಈ ಬಾರಿ ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಫಲಿತಾಂಶ ತ್ವರಿತವಾಗಿ ಬಿಡುಗಡೆಯಾಗಿರುವುದು ಸಂತಸ ನೀಡಿದ್ದು, ಈ ಕೆಲಸವನ್ನು ಶೀಘ್ರವಾಗಿ ಯಶಸ್ವಿಯಾಗಿ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೂ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದಲ್ಲಿ ತಂತ್ರಜ್ಞಾನದ ನೆರವು ಹಾಗೂ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಾಗ ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯ ಎನ್ನುವುದಕ್ಕೆ ಈ ವರ್ಷದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷಾ ಪ್ರಕ್ರಿಯೆ ನಿರ್ವಹಣೆ ಉತ್ತಮ ನಿದರ್ಶನ ಎಂದು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments are closed.