ಕರ್ನಾಟಕ

ರಾಯಚೂರು: ವಿದ್ಯಾರ್ಥಿನಿ ಮಧು ನಿಗೂಢ ಸಾವಿನ ಪ್ರಕರಣದ ಆರೋಪಿ ಸುದರ್ಶನ್ ಯಾದವ್’ಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

Pinterest LinkedIn Tumblr

ರಾಯಚೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಿಐಡಿ ತನಿಖೆ ಮುಂದುವರಿದಿದ್ದು ಬಂಧಿತ ಆರೋಪಿ ಸುದರ್ಶನ್ ಯಾದವ್ ನನ್ನು ಇಂದು(ಗುರುವಾರ) ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಾಲಯ ಆರೊಪಿಯನ್ನು ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಆರೋಪಿಯ ಐದು ದಿನಗಳ ಸಿಐಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಯಾದವ್ ನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇಂದು ಮಧ್ಯಾಹ್ನ 12.30ರ ಸುಮಾರಿಗೆ ಭಾರೀ ಭದ್ರತೆಯಲ್ಲಿ ಆರೊಪಿ ಸುದರ್ಶನ್ ನನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಮತ್ತೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದ್ದಾರೆ. ತೀರ್ಪಿನ ನಂತರ ಆರೊಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಸ್ಥಲಾಂತರಿಸಲಾಗಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಏ. 16ರಂದು ಶವವಾಗಿ ಪತ್ತೆಯಾಗಿದ್ದಾಗಿನಿಂದ ಇದು ರಾಜ್ಯಾದ್ಯಂತ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ವಿದ್ಯಾರ್ಥಿನಿ ಸಾವನ್ನು ಖಂಡಿಸಿ ರಾಯಚೂರು, ಹುಬ್ಬಳ್ಳಿ, ಬೆಂಗಳೂರು ಸೇರಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ ವಹಿಸಿದೆ.

Comments are closed.