ಕರ್ನಾಟಕ

ಮೋದಿಯು ಸ್ವಾಮಿ ವಿವೇಕಾನಂದರ 2ನೇ ರೂಪ: ಉಮೇಶ್ ಜಾಧವ್

Pinterest LinkedIn Tumblr

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಮಿ ವಿವೇಕಾನಂದರ ಎರಡನೇ ರೂಪ ಎಂದು ಡಾ. ಉಮೇಶ್ ಜಾಧವ್ ಹೇಳಿದ್ದಾರೆ.

ಚಿಂಚೋಳಿಯ ಹಾಲಕೋಡು ಮಠದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಾ.ಜಾಧವ್, ಸ್ವಾಮಿ ವಿವೇಕಾನಂದರ ಎರಡನೇ ರೂಪ ನಮ್ಮ ಪ್ರಧಾನಿ ಮೋದಿ. ವಿವೇಕಾನಂದರು ನಮ್ಮ ದೇಶದ ಸಂಸ್ಕೃತಿಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿದರು. ಮೋದಿಯವರು ಈ ಶತಮಾನದಲ್ಲಿ ಸ್ವಾಮಿ ವಿವೇಕಾನಂದರ ಎರಡನೇ ರೂಪದಲ್ಲಿ ಜನಿಸಿ, ನಮ್ಮ ದೇಶವನ್ನು ವಿಶ್ವದಲ್ಲಿ ತಲೆ ಎತ್ತುವಂತೆ ಮಾಡಿದ್ದಾರೆ ಎಂದರು.

ನಾನು ನನ್ನ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಬಿಟ್ಟಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಅವರು, ನನ್ನ ಕ್ಷೇತ್ರದ ಜನರಿಗಾಗಿ ಪಕ್ಷದ ಬಿಟ್ಟಿದ್ದೇನೆ. ನಾನು ನಮ್ಮ ಕ್ಷೇತ್ರದಲ್ಲಿರುವ ಸಕ್ಕರೆ ಕಾರ್ಖಾನೆಯನ್ನು ಮರು ಆರಂಭಿಸುವಂತೆ ಹಾಗೂ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ದಿವಂಗತರಾದಾಗ ಸಚಿವ ಪ್ರಿಯಾಂಕ್ ಖರ್ಗೆ ಸ್ಟಾರ್ ಹೋಟೆಲ್ ನಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸಿ ಪಕ್ಷಕ್ಕೆ ಅವಮಾನ ಮಾಡಿದ್ದರು. ಹೀಗಾಗಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವಂತೆ ಕೇಳಿದ್ದೆ. ಆದರೆ ನಮ್ಮ ಪಕ್ಷದ ಮುಖಂಡರು ನನ್ನ ಎರಡು ಬೇಡಿಕೆಗಳನ್ನು ಈಡೇರಿಸಲಿಲ್ಲ. ಇದಕ್ಕಾಗಿ ನಾನು ಪಕ್ಷ ಬಿಟ್ಟೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

ಸರ್ಕಾರ ರಚನೆ: ಇದೇ ಸಂದರ್ಭದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಲ್ಲೇಶ್ವರಂ ಶಾಸಕ ಡಾ.ಅಶ್ವಥ್ ನಾರಾಯಣ ಅವರು, ಮತ್ತೆ ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಬರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಜೆಡಿಎಸ್ ಮತ್ತು ಕಾಂಗ್ರೆಸ್ ಕಿತ್ತಾಟವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ನಾವು ಯಾವುದೇ ಆಪರೇಷನ್ ಕಮಲ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್, ಜೆಡಿಎಸ್ ನಾಯಕರ ಪರಸ್ಪರ ಕೆಸರೆರೆಚಾಟದಿಂದಲ್ಲೇ ಮೈತ್ರಿ ಸರ್ಕಾರ ಬಿಳುತ್ತೆ. ಮತ್ತೆ ನಮ್ಮ ನಾಯಕ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಮದು ವಿಶ್ವಾಸ ವ್ಯಕ್ತಪಡಿಸಿದರು.

ಚಿಂಚೋಳಿಯ ಹಾಲಗೋಡು ಮಠದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಪರ ಮತಯಾಚನೆ ಮಾಡಿದರು. ಈ ಬಾರಿ ಚಿಂಚೋಳಿಯ ಉಪಚುನಾವಣೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಸೋಮವಾರದಿಂದ ನಮ್ಮ ಪ್ರಮುಖ ನಾಯಕರು ಚುನಾವಣೆ ಪ್ರಚಾರ ಮಾಡಲಿದ್ದಾರೆ. ನಮ್ಮ ಅಭ್ಯರ್ಥಿ ಅವಿನಾಶ್ ಜಾದವ್ ರನ್ನು ಗೆಲ್ಲಿಸಿಕೊಂಡು ಬರುತ್ತವೆ ಎಂದರು.

Comments are closed.