ಕರ್ನಾಟಕ

ದೊಡ್ಡಬಳ್ಳಾಪುರದಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆ

Pinterest LinkedIn Tumblr

ದೊಡ್ಡಬಳ್ಳಾಪುರ: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡ ಬಳ್ಳಾಪುರದ ವೀರಾಪುರದಲ್ಲಿ ಈ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯ ನಿವಾಸಿಗಳಾದ ಲಕ್ಷ್ಮೀಪತಿ ಮತ್ತು ಶಾಂತಿನಗರ ಮೂಲದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೀರಾಪುರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ಷ್ಮೀಪತಿ ಮತ್ತು ಯುವತಿ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಮದುವೆಗೆ ಮನೆಯವರ ವಿರೋಧ ಇರಬಹುದು ಎಂದು ಆತಂಕಗೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ದೊಡ್ಡಬಳ್ಳಾಫುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments are closed.