ಕರ್ನಾಟಕ

ನಾನೂ ಬಿಜೆಪಿ ರಾಜ್ಯಾಧ್ಯಕ್ಷ ಆಕಾಂಕ್ಷಿ; ಬಸನಗೌಡ ಪಾಟೀಲ್ ಯತ್ನಾಳ್

Pinterest LinkedIn Tumblr


ಕಲಬುರಗಿ: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆಯಾಗಲಿದೆ ಎಂಬ ಸುದ್ದಿಯ ನಡುವೆಯೇ ಪಕ್ಷ ನನಗೆ ರಾಜ್ಯಾಧ್ಯಕ್ಷ ಜವಾಬ್ದಾರಿ ನೀಡಿದರೆ ನಿಭಾಯಿಸಲು ಸಿದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಸೋಮವಾರ ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರಿಗೆ ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕೆಂದು ನನ್ನ ಒತ್ತಾಯ. ಉತ್ತರ ಕರ್ನಾಟಕ ಯಾವಾಗಲೂ ಬಿಜೆಪಿಯ ಭದ್ರ ಕೋಟೆಯಾಗಿದೆ. ಬಿಜೆಪಿಯ ಅತಿ ಹೆಚ್ಚು ಶಾಸಕರು ಬರುವುದು ಉತ್ತರ ಕರ್ನಾಟಕದಿಂದಲೇಹಾಗಾಗಿ ಉತ್ತರ ಕರ್ನಾಟಕಕ್ಕೆ ಈ ಬಾರಿ ರಾಜ್ಯ ಅಧ್ಯಕ್ಷ ಹುದ್ದೆ ನೀಡಬೇಕೆಂದು ಆಗ್ರಹಿಸಿದ್ದೇವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಂತೆ ರಾಷ್ಟ್ರೀಯ ನಾಯಕರ ಮುಂದೆಯೂ ಪ್ರಸ್ತಾವನೆ ಇಟ್ಟಿದ್ದೇವೆ ಎಂದು ಹೇಳಿದರು.

ನಾನು ಮನಸ್ಸು ಮಾಡಿದರೆ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕಾಂಗ್ರೆಸ್ ಗೆ ಕರೆತರುವೆ ಎನ್ನುವ ಗೃಹ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿರುವ ಯತ್ನಾಳ್, ಕಾಂಗ್ರೆಸ್ ನಲ್ಲಿ ಡಿಕೆಶಿ ಮತ್ತು ಎಂಬಿ ಪಾಟೀಲ್ ನಡುವೆ ತಿಕ್ಕಾಟ ನಡೆಯುತ್ತಿದೆ. ನಿಮಗೆ ಅಲ್ಲಿ ಅಸಮಾಧಾನವಿದ್ದರೆ ಬಿಜೆಪಿಗೆ ಬನ್ನಿ ಸೇರಿ ಕೆಲಸ ಮಾಡೋಣ ಬಿಜೆಪಿ ಸೇರುವಂತೆ ಯತ್ನಾಳ್ ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ.

Comments are closed.