ಕರ್ನಾಟಕ

ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಊಹಾಪೋಹಗಳಿಗೆ ತೆರೆ ಎಳೆದ ಸಿದ್ದರಾಮಯ್ಯ

Pinterest LinkedIn Tumblr

ಹುಬ್ಬಳ್ಳಿ: ಸದ್ಯ ಮುಖ್ಯ.ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಎಚ್.ಡಿ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಸಿಎಂ ಆಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವರು ಅಭಿಮಾನದಿಂದ ನಾನು ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ, ಅದು ತಪ್ಪಾ ಎಂದು ಪ್ರಶ್ನಿಸಿದರು. ಸದ್ಯ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಆದ್ರೆ, ಕೊಟ್ರೆ, ಇದ್ರೆ, ಇದಕ್ಕೆಲ್ಲಾ ಉತ್ತರವಿಲ್ಲ ಎಂದು ಹೇಳಿದ ಅವರು.ಎಂ.ಬಿ.ಪಾಟೀಲ್‌ ಡಾ.ಸುಧಾಕರ್‌ ಸೇರಿದಂತೆ ಕೆಲ ಶಾಸಕರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದಿದ್ದರು.

Comments are closed.