ಕರ್ನಾಟಕ

ಫಲಿತಾಂಶಕ್ಕೂ ಮುನ್ನವೇ ಮಂಡ್ಯಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ!

Pinterest LinkedIn Tumblr


ಫಲಿತಾಂಶಕ್ಕೂ ಮುನ್ನವೇ ರಾಜಕಾರಣದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಕ್ರಿಯರಾಗಿದ್ದು ಇಂದು ಮಂಡ್ಯಕ್ಕೆ ಭೇಟಿಕೊಡುತ್ತೀದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಭೆಗೆ ಇಂದು ಮಂಡ್ಯದ ಕೆ.ಆರ್ ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. ಕೆ.ಆರ್ ಪೇಟೆ ಪುರಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಪಕ್ಷದ ಪೂರ್ವಭಾವಿ ಸಭೆ ನಡೆಯಲಿದೆ.

ಮಂಡ್ಯ ಉಸ್ತುವಾರಿ ಸಚಿವ ಸಿಎಸ್.ಪುಟ್ಟರಾಜು, ಶಾಸಕ ನಾರಾಯಣಗೌಡ ನೇತೃತ್ವದಲ್ಲಿ ಜೆಡಿಎಸ್ ಸಭೆ ನಡೆಯಲಿದ್ದು, ಇದೀಗ ನಾನು ಸೋಲಲಿ ಗೆಲ್ಲಲಿ ನಿಮ್ಮೊಂದಿಗೆ ಇರುತ್ತೇನೆ ಎಂಬ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ ಸಭೆಗೆ ನಿಖಿಲ್ ಆಗಮಿಸುತ್ತಿದ್ದಾರೆ.

ಲೋಕಸಭೆ ಚುನಾವಣೆ ನಂತರ ಜೆಡಿಎಸ್ ಸಭೆಯಲ್ಲಿ ಪ್ರಪ್ರಥಮವಾಗಿ ಪಾಲ್ಗೊಳ್ಳುತ್ತಿರುವ ನಿಖಿಲ್ ಕುಮಾರಸ್ವಾಮಿ, ಹಿಂದೆ ಚುನಾವಣೆ ನಂತರ ಔಪಚಾರಿಕವಾಗಿ ಒಮ್ಮೆ ಮಂಡ್ಯಕ್ಕೆ ಆಗಮಿಸಿ ಮತದಾರರು, ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದರು. ಬಳಿಕ ಮತ್ತೆ ಮಂಡ್ಯಗೆ ಬಂದಿರಲಿಲ್ಲ. ಇದೀಗ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

Comments are closed.