ಕರ್ನಾಟಕ

ಮೆಟ್ರೋ ಬಳಿ ಅನುಮಾನಾಸ್ಪದ ವ್ಯಕ್ತಿ ಪ್ರಕರಣ! ಆತನ ಡಿಟೇಲ್ಸ್​ ಕೇಳಿ ಪೊಲೀಸರು ಕಂಗಾಲು!!

Pinterest LinkedIn Tumblr


ರಾಜ್ಯದಾದ್ಯಂತ ಆತಂಕಕ್ಕೆ ಕಾರಣವಾಗಿದ್ದ ಮೆಟ್ರೋ ಸ್ಟೇಶನ್​​ನ ಶಂಕಿತ ವ್ಯಕ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪಶ್ಚಿಮವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದು, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಮೆಟ್ರೋ ಸ್ಟೇಷನ್​ನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದು, ಬೆಂಗಳೂರಿಗರ ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪಶ್ಚಿಮವಿಭಾಗ ಪೊಲೀಸರು ಆತನಿಗಾಗಿ ಬಲೆ ಬೀಸಿದ್ದರು. ಇದೀಗ ಅನುಮಾನಾಸ್ಪದ ವ್ಯಕ್ತಿ ಸಾಜಿದ್ ಖಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿಸಿಪಿ ರವಿ ಚೆನ್ನಣ್ಣನವರ್​ ವಿಚಾರಣೆ ನಡೆಸಿದ್ದಾರೆ.

ಪೊಲೀಸರ ವಶದಲ್ಲಿರುವ ಸಾಜಿದ್​ ಖಾನ್​ ರಂಜಾನ್ ಹಿನ್ನೆಲೆಯಲ್ಲಿ ದಾನ(ಝಕಾತ್ ) ಸ್ವೀಕರಿಸಲು ಬಂದಿದ್ದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಭಿಕ್ಷಾಟನೆಗಾಗಿ ಮಡದಿ ಹಾಗೂ ಮಕ್ಕಳ ಸಮೇತ ಬಂದಿದ್ದು, ಪ್ರತಿವರ್ಷವೂ ರಂಜಾನ್ ವೇಳೆಗೆ ಬೆಂಗಳೂರಿಗೆ ಬಂದು ಭಿಕ್ಷಾಟನೆ ಮಾಡುವುದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ ಭಿಕ್ಷಾಟನೆಗಾಗಿ ಬಂದಿರುವ ಸಾಜಿದ್ ಲಾಡ್ಜ್​ನಲ್ಲಿ ಉಳಿದುಕೊಂಡಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಈ ಬಗ್ಗೆ ವಿವರಣೆ ನೀಡಿರುವ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ ಆತನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಮಾಹಿತಿ ಪಡೆಯುತ್ತಿದ್ದೇವೆ. ಆದರೆ ಬೆಂಗಳೂರಿನಲ್ಲಿ ಪೊಲೀಸ್ ಸೇರಿದಂತೆ ಎಲ್ಲ ವ್ಯವಸ್ಥೆಗಳು ಸುಭದ್ರವಾಗಿದ್ದು, ಯಾರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದರು.

Comments are closed.