ಕರ್ನಾಟಕ

ನಮ್ಮ ಮುಂದೆ ಆಪರೇಷನ್ ಕಮಲ ನಡೆಯಲ್ಲ ಎಂದ ಡಿಕೆಶಿವಕುಮಾರ್ ಗೆ ಡಿಚ್ಚಿ ಹೊಡೆದ ಯಡಿಯೂರಪ್ಪ

Pinterest LinkedIn Tumblr


ಹುಬ್ಬಳ್ಳಿ: ನಮ್ಮ ಮುಂದೆ ಆಪರೇಷನ್ ಕಮಲ ನಡೆಯುವುದಿಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದ ಸಚಿವ ಡಿಕೆ ಶಿವಕುಮಾರ್ ಅವರಿಗೆ ಬಿಎಸ್ ಯಡಿಯೂರಪ್ಪ ಡಿಚ್ಚಿ ಕೊಟ್ಟಿದ್ದಾರೆ.

ಕುಂದಗೋಳದ ಕೂಬಿಹಾಳ ತಾಲೂಕು ಪಂಚಾಯತ್ ಸದಸ್ಯ ಈಶ್ವರಪ್ಪ ಎಲಿವಾಳ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಎಸ್‍ವೈ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈಶ್ವರಪ್ಪ ಸೇರ್ಪಡೆಯಾಗಿದ್ದಾರೆ. ಅಲ್ಲದೇ ದ್ಯಾವನೂರು ಗ್ರಾಮ ಪಂಚಾಯತ್ ಪ್ರಮುಖ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತನಾಡಿ, ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆ ಗೆದ್ದರೆ ನಾವೇ ಸರ್ಕಾರ ರಚನೆ ಮಾಡುತ್ತೇನೆ. 25 ಸಾವಿರ ಮತಗಳು ಅಂತರದಿಂದ ಎಸ್ ಐ ಚಿಕ್ಕನಗೌಡ್ರು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Comments are closed.