ಕರ್ನಾಟಕ

ನನ್ನ ಜೀವಿತ ಅವಧಿಯವರೆಗೆ ಕೋಮುವಾದಿ ಪಕ್ಷದ ಜೊತೆಗೆ ಕೈ ಜೋಡಿಸಲ್ಲ: ಸಿದ್ದರಾಮಯ್ಯ

Pinterest LinkedIn Tumblr


ಕಲಬುರಗಿ: ನಾನು ಬದುಕಿರೋವರೆಗೂ ಕೋಮುವಾದಿ ಪಕ್ಷದ ಜೊತೆಗೆ ಕೈ ಜೋಡಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಚಿಂಚೋಳಿಯಲ್ಲಿ ನಡೆದ ಕುರುಬ ಸಮುದಾಯದ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ, ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ಮಾಡುವುದಕ್ಕಾಗಿ ರಾಜಕೀಯದಲ್ಲಿ ಇದ್ದೇನೆ. ಅಧಿಕಾರದ ದಾಹಕ್ಕೆ ಯಾವತ್ತೂ ರಾಜಕೀಯ ಮಾಡಿಲ್ಲ. ಬಿಜೆಪಿಯು ಹಿಂದುಳಿದ ವರ್ಗಗಳ ಏಳಿಗೆಗೆ ಅಡ್ಡಿಯಾಗುತ್ತಿದೆ ಎಂದು ಆರೋಪಿಸಿದರು.

ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್. ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರಿಗೆ ಧಮ್ ಇದ್ದರೆ, ತಾಕತ್ತಿದ್ದರೆ ತನ್ನನ್ನ ಸಿಎಂ ಮಾಡಲಿ ಅಂತ ಬಿಜೆಪಿ ಹೈಕಮಾಂಡ್‍ಗೆ ಹೇಳಲಿ. ಮುಖ್ಯಮಂತ್ರಿ ಆಗುತ್ತೇನೆ ಅಂತ ಹೇಳುವುದಕ್ಕೆ ಧಮ್ ಬೇಕು ಎಂದು ತಿರುಗೇಟು ನೀಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಹೇಳಿಕೆಗೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಬಂಡೆಪ್ಪ ಕಾಶಂಪೂರ್ ಅವರು, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡ ಬಳಿಕ ನಮ್ಮ ಹೋರಾಟಗಳಿಗೆ ಫುಲ್ ಸ್ಟಾಪ್ ಹಾಕಿದ್ದೇವೆ. ಮೈತ್ರಿ ಧರ್ಮ ಪಾಲನೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ವಿಶ್ವನಾಥ್ ಅವರು ದೊಡ್ಡವರು. ಯಾಕೆ ಹಾಗೆ ಮಾತನಾಡಿದ್ದಾರೋ ಗೊತ್ತಿಲ್ಲ. ಆದರೆ ಅವರ ಮಾತುಗಳು ಮೈತ್ರಿ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.

Comments are closed.